ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ 8 ಗಂಟೆಗಳ ಕಾಲ ಸಿಬಿಐ ಡ್ರಿಲ್!

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿದ್ದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ನಿರ್ದೇಶನದ ಮೇರೆಗೆ ಪ್ರಾಥಮಿಕ ವಿಚಾರಣೆ ನಡೆಸುತ್ತಿರುವ ಸಿಬಿಐನಿಂದ ಇಂದು 8 ಗಂಟೆಗಳ ಕಾಲ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು  ಪ್ರಶ್ನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್

ಮುಂಬೈ: ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿದ್ದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ನಿರ್ದೇಶನದ ಮೇರೆಗೆ ಪ್ರಾಥಮಿಕ ವಿಚಾರಣೆ ನಡೆಸುತ್ತಿರುವ ಸಿಬಿಐನಿಂದ ಇಂದು 8 ಗಂಟೆಗಳ ಕಾಲ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು  ಪ್ರಶ್ನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 

ವಿಚಾರಣೆ ವೇಳೆಯಲ್ಲಿ ತಮ್ಮ ವಿರುದ್ಧದ ಆರೋಪಗಳನ್ನು ಅಲ್ಲಗಳೆದಿರುವ ದೇಶ್ ಮುಖ್, ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವ ನಿಟ್ಟಿನಲ್ಲಿ ಪರಮ್ ಬೀರ್ ಸಿಂಗ್ ತಮ್ಮ ವಿರುದ್ಧ ಇಲ್ಲಸಲ್ಲದ ಭ್ರಷ್ಟಾಚಾರ ಆರೋಪಗಳನ್ನು ಮಾಡಿರುವುದಾಗಿ ಅಧಿಕಾರಿಗಳಿಗೆ ಅವರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಬಿಐ ಅಧಿಕಾರಿಗಳು ತಂಗಿದ್ದ ನಗರದ ಹೊರವಲಯ ಸಾಂತಾಕ್ರೂಜ್ ನ ಡಿಆರ್ ಡಿಒ ಅತಿಥಿಗೃಹದಲ್ಲಿ  ಹಿರಿಯ ಎನ್ ಸಿಪಿ ಮುಖಂಡರನ್ನು ವಿಚಾರಣೆ ನಡೆಸಲಾಗಿದೆ. ಬೆಳಗ್ಗೆ 10 ಗಂಟೆಗೆ ಆರಂಭವಾದ ವಿಚಾರಣೆ ಸಂಜೆ 6 ಗಂಟೆಗೆ ಮುಕ್ತಾಯವಾಗಿದೆ . ಎಸ್ ಪಿ ಶ್ರೇಯಾಂಕದ ಅಧಿಕಾರಿಗಳು 8 ಗಂಟೆಗಳ ಕಾಲ ಮಾಜಿ ಗೃಹ ಸಚಿವರನ್ನು ವಿಚಾರಣೆ ನಡೆಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಾಳೆಯೂ ವಿಚಾರಣೆಗೆ ದೇಶ್ ಮುಖ್ ಅವರನ್ನು ಸಿಬಿಐ ಕರೆದಿದ್ದೆಯೇ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.

ಪರಮ್ ಬೀರ್ ಸಿಂಗ್ ಮಾಡಿರುವ ಭ್ರಷ್ಟಾಚಾರ ಆರೋಪ ಹಾಗೂ ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ  ಬಂಧನ ಕುರಿತಂತೆ  ತನಿಖೆಗೆ ನಡೆಸುತ್ತಿರುವ ಸಿಬಿಐ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ದೇಶ್ ಮುಖ್ ಅವರಿಗೆ ಸೋಮವಾರ ನೋಟಿಸ್ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com