ಬೃಹತ್ ಭ್ರಷ್ಟಾಚಾರ ಆರೋಪ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್‌ ಸಿಬಿಐ ಎದುರು ಹಾಜರು!

ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಬುಧವಾರ ಸಿಬಿಐ ಮುಂದೆ ಹಾಜರಾಗಿದ್ದಾರೆ.
ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್
ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್

ಮುಂಬೈ: ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಬುಧವಾರ ಸಿಬಿಐ ಮುಂದೆ ಹಾಜರಾಗಿದ್ದಾರೆ.

ಮುಂಬೈನ ಬಾರ್‌ ಮತ್ತು ರೆಸ್ಟೊರೆಂಟ್‌ಗಳಿಂದ ಪ್ರತಿ ತಿಂಗಳು 100 ಕೋಟಿ ರೂ ವಸೂಲಿ ಮಾಡಿಕೊಡುವಂತೆ ಪೊಲೀಸ್‌ ಅಧಿಕಾರಿಗಳಿಗೆ ದೇಶಮುಖ್‌ ಸೂಚಿಸಿದ್ದರು ಎಂದು ಹಿರಿಯ ಐಪಿಎಸ್‌ ಅಧಿಕಾರಿ ಮತ್ತು ಮುಂಬೈನ ಮಾಜಿ ಪೊಲೀಸ್‌ ಕಮಿಷನರ್‌ ಪರಮ್‌ ಬೀರ್‌ ಸಿಂಗ್‌ ಆರೋಪಿಸಿದ್ದರು. ಈ ಹೇಳಿಕೆ  ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಅಲ್ಲೋಕಲ್ಲೋಲ ಸೃಷ್ಟಿ ಮಾಡಿತ್ತು, ಅಂತೆಯೇ ಈ ಬಗ್ಗೆ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್‌ ಆದೇಶ ನೀಡಿತ್ತು.

ಇದರ ಬೆನ್ನಲ್ಲೇ ಗೃಹ ಸಚಿವ ಸ್ಥಾನಕ್ಕೆ ಅನಿಲ್ ದೇಶ್ ಮುಖ್ ಕೂಡ ರಾಜಿನಾಮೆ ಸಲ್ಲಿಕೆ ಮಾಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೋಮವಾರ ದೇಶಮುಖ್‌ ಅವರಿಗೆ ನೋಟಿಸ್‌ ನೀಡಿತ್ತು.

ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ದೇಶ್ ಮುಖ್ ಹಾಜರಾಗಿದ್ದಾರೆ. ಸಾಂತಾಕ್ರೂಜ್‌ನಲ್ಲಿರುವ ಡಿಆರ್‌ಡಿಒ ಅತಿಥಿ ಗೃಹದಲ್ಲಿದ್ದ ಸಿಬಿಐ ತನಿಖಾ ತಂಡದ ಎದುರು ದೇಶಮುಖ್‌ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಇದುವರೆಗೆ, ಪರಮ್‌ ಬೀರ್‌ ಸಿಂಗ್‌, ಬಂಧನದಲ್ಲಿರುವ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ, ಡಿಸಿಪಿ ರಾಜು ಭುಜಬಲ್‌, ಎಸಿಪಿ ಸಂಜಯ ಪಾಟೀಲ್‌, ವಕೀಲರಾದ ಜಯಶ್ರೀ ಪಾಟೀಲ್‌ ಮತ್ತು ಹೋಟೆಲ್‌ ಮಾಲೀಕ ಮಹೇಶ್‌ ಶೆಟ್ಟಿ ಅವರ ಹೇಳಿಕೆಗಳನ್ನು ಸಿಬಿಐ ದಾಖಲಿಸಿದೆ.

ಜತೆಗೆ, ದೇಶಮುಖ್‌ ಅವರ ಆಪ್ತ ಸಹಾಯಕ ಕುಂದನ್‌ ಶಿಂಧೆ ಮತ್ತು ಆಪ್ತ ಕಾರ್ಯದರ್ಶಿ ಸಂಜೀವ್‌ ಪಳಾಂದೆ ಅವರ ವಿಚಾರಣೆ ನಡೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com