ಕೋಲ್ಕತ್ತಾಗೆ ಪ್ರಯಾಣಿಸಬೇಕೇ? ಕರ್ನಾಟಕ ಸೇರಿ ಹಲವು ರಾಜ್ಯಗಳ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ!

ಮಹಾರಾಷ್ಟ್ರ, ಕರ್ನಾಟಕ, ಕೇರಳ ಮತ್ತು ತೆಲಂಗಾಣದ ಪ್ರಯಾಣಿಕರು 72 ಗಂಟೆಗಳಿಗಿಂತ ಕಡಿಮೆ ಅವಧಿಗೂ ಮೊದಲು ನಡೆಸಿದ ಕೊರೋನಾ ವೈರಸ್ ಪರೀಕ್ಷಾ ಸರ್ಟಿಫಿಕೇಟ್ ಕಡ್ಡಾಯವಾಗಿ ತರಬೇಕು ಎಂದು ಕೋಲ್ಕತ್ತಾ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶ ಹೊರಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೊಲ್ಕತ್ತಾ: ಮಹಾರಾಷ್ಟ್ರ, ಕರ್ನಾಟಕ, ಕೇರಳ ಮತ್ತು ತೆಲಂಗಾಣದ ಪ್ರಯಾಣಿಕರು 72 ಗಂಟೆಗಳಿಗಿಂತ ಕಡಿಮೆ ಅವಧಿಗೂ ಮೊದಲು ನಡೆಸಿದ ಕೊರೋನಾ ವೈರಸ್ ಪರೀಕ್ಷಾ ಸರ್ಟಿಫಿಕೇಟ್ ಕಡ್ಡಾಯವಾಗಿ ತರಬೇಕು ಎಂದು ಕೋಲ್ಕತ್ತಾ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶ ಹೊರಡಿಸಿದೆ.  

ವಿಮಾನ ನಿಲ್ದಾಣದ ಅಧಿಕೃತ ಟ್ವೀಟರ್ ಹ್ಯಾಂಡಲ್ ನಲ್ಲಿ, 'ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಮಹಾರಾಷ್ಟ್ರ, ಕರ್ನಾಟಕ, ಕೇರಳ ಮತ್ತು ತೆಲಂಗಾಣದಿಂದ #ಕೋಲ್ಕತಾ ಏರ್‌ಪೋರ್ಟ್‌ಗೆ ಬರುವ ಪ್ರಯಾಣಿಕರು ನಿರ್ಗಮಿಸುವ ಮೊದಲು 72 ಗಂಟೆಗಳ ಒಳಗೆ ನಡೆಸಿದ ಆರ್‌ಟಿ ಪಿಸಿಆರ್ ನಕಾರಾತ್ಮಕ ಪರೀಕ್ಷಾ ವರದಿಯನ್ನು ತರಬೇಕು' ಎಂದು ಟ್ವೀಟಿಸಿದೆ. 

ಕೋಲ್ಕತ್ತಾದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗಿದ್ದು ನಿನ್ನೆ 1,271 ಸೋಂಕುಗಳು ದಾಖಲಾಗಿದ್ದವು. ಅಲ್ಲದೆ ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 13ರಂದು ಅತಿ ಹೆಚ್ಚು ಒಂದೇ ದಿನ 4,817 ಕರೋನವೈರಸ್ ಪ್ರಕರಣಗಳನ್ನು ದಾಖಲಾಗಿತ್ತು.

ಏತನ್ಮಧ್ಯೆ, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1.84 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿದ್ದು 1,000ಕ್ಕೂ ಹೆಚ್ಚು ಸಾವು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com