ಅಂಬೇಡ್ಕರ್​ ಜಯಂತಿ: ಸಂವಿಧಾನ ಶಿಲ್ಪಿಯನ್ನು ಸ್ಮರಿಸಿದ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ

ದೇಶಾದ್ಯಂತ ಬುಧವಾರ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಜೀವನ, ಸಾಧನೆಗಳು, ಸಂವಿಧಾನ, ದೇಶಕ್ಕಾಗಿ ಮಾಡಿರುವ ಕೆಲಸಗಳನ್ನು ಜನರು, ರಾಜಕೀಯ ಮುಖಂಡರು ಸ್ಮರಿಸುತ್ತಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ದೇಶಾದ್ಯಂತ ಬುಧವಾರ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಜೀವನ, ಸಾಧನೆಗಳು, ಸಂವಿಧಾನ, ದೇಶಕ್ಕಾಗಿ ಮಾಡಿರುವ ಕೆಲಸಗಳನ್ನು ಜನರು, ರಾಜಕೀಯ ಮುಖಂಡರು ಸ್ಮರಿಸುತ್ತಿದ್ದಾರೆ.
    
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಮೋದಿ, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಹೋರಾಟ ನಡೆಸಿದ ಅಂಬೇಡ್ಕರ್ ಎಂದಿಗೂ ಸ್ಮರಣೀಯರು. ಅವರ ಹೋರಾಟ ಪ್ರತಿ ಪೀಳಿಗೆಗೂ ಉದಾಹರಣೆ ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮಾಡಿ, ಸಂವಿಧಾನ ಶಿಲ್ಪಿ, ಭಾರತರತ್ನ ಡಾ|ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯಂದು ಅವರಿಗೆ ಶ್ರದ್ಧಾಪೂರ್ವಕ ಪ್ರಣಾಮಗಳು. ಸಮಾಜದಲ್ಲಿ ಸ್ವಾತಂತ್ರ್ಯ, ಸಮಾನತೆಗಳನ್ನು ಪ್ರತಿಪಾದಿಸುವ ಜೊತೆಗೆ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾಗಿ ಹೋರಾಡಿದ ಡಾ|ಅಂಬೇಡ್ಕರ್ ಅವರ ಸಾಧನೆ, ದೇಶ ನಿರ್ಮಾಣದಲ್ಲಿ ಅವರ ಕೊಡುಗೆ ಚರಿತ್ರಾರ್ಹ ಎಂದು ಬಣ್ಣಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com