ರಾಜಸ್ಥಾನದ ಎಲ್ಲಾ ನಗರಗಳಲ್ಲಿ ಶುಕ್ರವಾರದಿಂದ 12 ಗಂಟೆ ಕರ್ಫ್ಯೂ ಜಾರಿ

ಆತಂಕಕಾರಿಯಾಗಿ ಹೆಚ್ಚಾಗಿರುತ್ತಿರುವ ಕೋವಿಡ್-19 ಪ್ರಕರಣಗಳನ್ನು ತಡೆಗಟ್ಟುವ ಕ್ರಮವಾಗಿ ರಾಜಸ್ಥಾನದ ಎಲ್ಲಾ ನಗರಗಳಲ್ಲಿ ಶುಕ್ರವಾರ  ಸಂಜೆ ಆರು ಗಂಟೆಯಿಂದ ಬೆಳಗ್ಗೆ ಆರು ಗಂಟೆಯವರೆಗೂ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ. ಈ ಮಾಸಾಂತ್ಯದವರೆಗೂ ಈ ಕರ್ಫ್ಯೂ ಜಾರಿಯಲ್ಲಿರುತ್ತದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜೈಪುರ: ಆತಂಕಕಾರಿಯಾಗಿ ಹೆಚ್ಚಾಗಿರುತ್ತಿರುವ ಕೋವಿಡ್-19 ಪ್ರಕರಣಗಳನ್ನು ತಡೆಗಟ್ಟುವ ಕ್ರಮವಾಗಿ ರಾಜಸ್ಥಾನದ ಎಲ್ಲಾ ನಗರಗಳಲ್ಲಿ ಶುಕ್ರವಾರ ಸಂಜೆ ಆರು ಗಂಟೆಯಿಂದ ಬೆಳಗ್ಗೆ ಆರು ಗಂಟೆಯವರೆಗೂ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ. ಈ ಮಾಸಾಂತ್ಯದವರೆಗೂ ಈ ಕರ್ಫ್ಯೂ ಜಾರಿಯಲ್ಲಿರುತ್ತದೆ. 

ಪ್ರತಿದಿನ ಸಂಜೆ 5 ಗಂಟೆಯಿಂದ ಮಾರ್ಕೆಟ್ ಗಳ ಬಂದ್, ಶಿಕ್ಷಣ ಸಂಸ್ಥೆಗಳು, ಕೋಚಿಂಗ್ ಕೇಂದ್ರಗಳು ಸಂಪೂರ್ಣ ಬಂದ್ ಸೇರಿದಂತೆ ಮತ್ತಿತರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾರ್ಖಾನೆಗಳು ಮತ್ತು ಬಸ್ ನಿಲ್ದಾಣಗಳಿಗೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ. ಸಾರ್ವಜನಿಕ ಕಾರ್ಯಕ್ರಮಗಳು, ಕ್ರೀಡಾ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ.

ವಿವಾಹ ಕಾರ್ಯಕ್ರಮದಲ್ಲಿ ಗರಿಷ್ಠ 50 ಅತಿಥಿಗಳಿಗೆ ಅವಕಾಶ ನೀಡಲಾಗಿದೆ. ಬುಧವಾರ ಜೈಪುರದಲ್ಲಿ1,325 ಸೇರಿದಂತೆ ಒಟ್ಟು 6,200 ಹೊಸ ಕೋವಿಡ್ ಪ್ರಕರಣಗಳು ರಾಜಸ್ಥಾನದಲ್ಲಿ ವರದಿಯಾಗಿದೆ.ಕಳೆದ ತಿಂಗಳು ಶೇ. 2 ರಷ್ಟಿದ್ದ ಪಾಸಿಟಿವಿಟಿ ದರ ಪ್ರಸ್ತುತ ಶೇ. 8ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com