ಕೋವಿಡ್-19: ಮೇ 15 ರವರೆಗೂ ಕೇಂದ್ರ ಸಂರಕ್ಷಿತ ಸ್ಮಾರಕಗಳು, ಮ್ಯೂಸಿಯಂ ಬಂದ್

ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ  ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ ವ್ಯಾಪ್ತಿಯಲ್ಲಿರುವ ಎಲ್ಲಾ ಕೇಂದ್ರ ಸಂರಕ್ಷಿತ ಸ್ಮಾರಕಗಳು, ತಾಣಗಳು, ವಸ್ತು ಸಂಗ್ರಹಾಲಯಗಳನ್ನು ಮೇ 15 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಬಂದ್ ಮಾಡಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಗುರುವಾರ ತಿಳಿಸಿದೆ.

Published: 15th April 2021 11:28 PM  |   Last Updated: 16th April 2021 12:44 PM   |  A+A-


Taj_Mahal1

ತಾಜ್ ಮಹಲ್

Posted By : Nagaraja AB
Source : PTI

ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ ವ್ಯಾಪ್ತಿಯಲ್ಲಿರುವ ಎಲ್ಲಾ ಕೇಂದ್ರ ಸಂರಕ್ಷಿತ ಸ್ಮಾರಕಗಳು, ತಾಣಗಳು, ವಸ್ತು ಸಂಗ್ರಹಾಲಯಗಳನ್ನು ಮೇ 15 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಬಂದ್ ಮಾಡಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಗುರುವಾರ ತಿಳಿಸಿದೆ.

ಈ ನಿಟ್ಟಿನಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ ಆದೇಶ ಹೊರಡಿಸಿದ್ದು, ಸಂಸ್ಕೃತಿ ಸಚಿವ  ಪ್ರಹ್ಲಾದ್ ಪಟೇಲ್  ಇಂದು ಸಂಜೆ ಟ್ವೀಟ್ ಮಾಡಿದ್ದಾರೆ. 

 

ಕೋವಿಡ್ ಪರಿಸ್ಥಿತಿಯಿಂದಾಗಿ ಎಎಸ್ಐ ಅಡಿಯಲ್ಲಿರುವ ಎಲ್ಲಾ ಕೇಂದ್ರೀಕೃತ ಸಂರಕ್ಷಿತ ಸ್ಮಾರಕಗಳು, ತಾಣಗಳು ಮತ್ತು ವಸ್ತುಸಂಗ್ರಹಾಲಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮೇ 15 ರವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಚ್ಚಲು ನಿರ್ಧರಿಸಲಾಗಿದೆ ಎಂದು ಎಎಸ್ಐ ತಿಳಿಸಿದೆ.

ಕಳೆದ ವರ್ಷವೂ ಎಎಸ್ಐ ನಿರ್ವಹಿಸುತ್ತಿದ್ದ ಎಲ್ಲಾ ಸ್ಮಾರಕಗಳು ಮತ್ತು ತಾಣಗಳನ್ನು ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದ ಮುಚ್ಚಲಾಗಿತ್ತು.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp