ಕೋವಿಡ್ -19 ಅನ್ನು ನೈಸರ್ಗಿಕ ವಿಪತ್ತು ಎಂದು ಪರಿಗಣಿಸಿ: ಕೇಂದ್ರಕ್ಕೆ ಮಹಾ ಸಿಎಂ ಉದ್ಧವ್ ಠಾಕ್ರೆ ಒತ್ತಾಯ

ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನೈಸರ್ಗಿಕ ವಿಪತ್ತು ಎಂದು ಪರಿಗಣಿಸುವಂತೆ ಒತ್ತಾಯಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. 
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ಮುಂಬೈ: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನೈಸರ್ಗಿಕ ವಿಪತ್ತು ಎಂದು ಪರಿಗಣಿಸುವಂತೆ ಒತ್ತಾಯಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. 

ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನೈಸರ್ಗಿಕ ವಿಪತ್ತು ಎಂದು ಘೋಷಿಸಿದರೆ ಸರ್ಕಾರ ರಾಜ್ಯ ವಿಪತ್ತು ಪರಿಹಾರ ನಿಧಿಯನ್ನು(ಎಸ್‌ಡಿಆರ್ಎಫ್) ಕೊರೋನಾ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಲು ಬಳಸಿಕೊಳ್ಳಲಾಗುವುದು ಎಂದು ಮಹಾ ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ.

ಕೇಂದ್ರ ವಿಪತ್ತು ನಿರ್ವಹಣಾ ಕಾನೂನಿನ ಭಾಗವಾಗಿ ಎಲ್ಲಾ ರಾಜ್ಯ ವಿಪತ್ತು ನಿರ್ವಹಣಾ ಕಾಯ್ದೆಗಳನ್ನು ರಚಿಸಲಾಗಿದೆ; ಆದ್ದರಿಂದ ಸಾಂಕ್ರಾಮಿಕ ರೋಗ ಪೀಡಿತರಿಗೆ ಸಹಾಯ ಮಾಡಲು ಎಸ್‌ಡಿಆರ್‌ಎಫ್ ಬಳಸಲು ರಾಜ್ಯಕ್ಕೆ ಕೇಂದ್ರ ಸರ್ಕಾರದ ಅನುಮತಿ ಬೇಕು ಎಂದು ಸರ್ಕಾರಿ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಎಸ್‌ಡಿಆರ್‌ಎಫ್ ಹಣ ಬಳಸಿಕೊಳ್ಳಲು ಅನುಮತಿ ಕೋರಿ ಮುಖ್ಯಮಂತ್ರಿ ಬುಧವಾರ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಎಂದು ಅವರು ಹೇಳಿದ್ದಾರೆ. 

ಪ್ರಸ್ತುತ, ಪ್ರವಾಹ, ಮಿಂಚಿನ ಘಟನೆಗಳು, ಭಾರೀ ಮಳೆಯಾದಾಗ ಆಸ್ತಿಪಾಸ್ತಿ ನಷ್ಟ ಅಥವಾ ಜೀವನೋಪಾಯಕ್ಕಾಗಿ ಎಸ್‌ಡಿಆರ್‌ಎಫ್ ಹಣ ಬಳಸಿಕೊಳ್ಳಲು ಅವಕಾಶ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com