ಮಾನವೀಯತೆ ಆಧಾರದ ಮೇಲೆ ಪ್ರತಿಭಟನೆ ಹಿಂಪಡೆಯಿರಿ: ರೈತರರಿಗೆ ಹರಿಯಾಣ ಮುಖ್ಯಮಂತ್ರಿ ಕೋರಿಕೆ
ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಾನವೀಯತೆ ಆಧಾರದಲ್ಲಿ ಪ್ರತಿಭಟನೆ ಹಿಂಪಡೆಯುವಂತೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮನವಿ ಮಾಡಿದ್ದಾರೆ.
Published: 15th April 2021 10:54 PM | Last Updated: 16th April 2021 12:43 PM | A+A A-

ಪ್ರತಿಭಟನಾನಿರತ ರೈತರು
ಚಂಡೀಘಡ: ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಾನವೀಯತೆ ಆಧಾರದಲ್ಲಿ ಪ್ರತಿಭಟನೆ ಹಿಂಪಡೆಯುವಂತೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮನವಿ ಮಾಡಿದ್ದಾರೆ.
ಒಳಾಂಗಣ ಹಾಗೂ ಹೊರಾಂಗಣದ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕ್ರಮವಾಗಿ ಶೇ. 50 ಮತ್ತು 200 ಜನರು ಸೇರಲು ಮಾತ್ರ ಅವಕಾಶ ಕಲ್ಪಿಸಿ ಸರ್ಕಾರ ಕಠಿಣ ನಿರ್ಬಂಧ ಹೇರಿದ್ದ ಬೆನ್ನಲ್ಲೇ ಅವರು ಈ ರೀತಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಹಿಂದೆ ಹೊರಾಂಗಣ ಕಾರ್ಯಕ್ರಮಗಳಿಗೆ 500, ಒಳಾಂಗಣ ಕಾರ್ಯಕ್ರಮಗಳಿಗೆ 200 ಜನರಿಗೆ ಮಾತ್ರ ಸರ್ಕಾರ ಅವಕಾಶ ಕಲ್ಪಿಸಿತ್ತು.
ಕೋವಿಡ್- ಪರಿಸ್ಥಿತಿ ಕುರಿತ ಪರಾಮರ್ಶನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಭಟನೆ ಮಾಡುವುದು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕು, ಯಾರೇ ಆದರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಿದರೆ ರಾಜ್ಯಕ್ಕೆ ಯಾವುದೇ ಸಮಸ್ಯೆಯಿಲ್ಲ, ಹೆಚ್ಚಾಗುತ್ತಿರುವ ಕೋವಿಡ್ -19 ಪ್ರಕರಣಗಳು ಕಳವಳಕಾರಿ ಸಂಗತಿಯಾಗಿದೆ. ಕೋವಿಡ್ ಸಂದರ್ಭದಲ್ಲಿ ಜೀವ ಅಪಾಯದಲ್ಲಿ ಸಿಲುಕುವ ಸಾಧ್ಯತೆಯಿದೆ. ಆದ್ದರಿಂದ ಪ್ರತಿಭಟನೆ ಮಾಡಲು ಇದು ಸರಿಯಾದ ಸಮಯವಲ್ಲಾ ಎಂದು ಹೇಳಿರುವುದಾಗಿ ಅಧಿಕೃತ ಹೇಳಿಕೆಗಳು ತಿಳಿಸಿವೆ.
ಮಾನವೀಯತೆ ಆಧಾರದಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದ ಮುಖ್ಯಮಂತ್ರಿ, ಪರಿಸ್ಥಿತಿ ಸುಧಾರಿಸಿದ ನಂತರ ಅವರು ಬೇಕಾದರೆ ಪ್ರತಿಭಟನೆ ಮುಂದುವರೆಸಬಹುದು ಎಂದರು. ಪ್ರತಿಭಟನಾನಿರತ ರೈತರನ್ನು ಸಂಪರ್ಕಿಸಿ ಅವರನ್ನು ಮನವೊಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೊರೋನಾ ಸಂಬಂಧಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆರೋಗ್ಯಸಚಿವ ಅನಿಲ್ ಝಾ ನಿರ್ದೇಶಿಸಿದರು.