ದೇಶದ ದೈನಂದಿನ ಕೋವಿಡ್ ಸೋಂಕು ಪ್ರಕರಣಗಳ ಪೈಕಿ ಶೇ.80ರಷ್ಟು ಪ್ರಕರಣಗಳು 10 ರಾಜ್ಯಗಳಲ್ಲಿದೆ: ಕೇಂದ್ರ ಆರೋಗ್ಯ ಇಲಾಖೆ

ದೇಶದಲ್ಲಿ ಇಂದು ಪತ್ತೆಯಾಗಿರುವ 2 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣಗಳ ಪೈಕಿ ಶೇ.80ರಷ್ಟು ಸೋಂಕು ಪ್ರಕರಣಗಳು ಕೇವಲ 10 ರಾಜ್ಯಗಳಿಂದ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೊರೋನಾ ವೈರಸ್ ಪರೀಕ್ಷೆ
ಕೊರೋನಾ ವೈರಸ್ ಪರೀಕ್ಷೆ

ನವದೆಹಲಿ: ದೇಶದಲ್ಲಿ ಇಂದು ಪತ್ತೆಯಾಗಿರುವ 2 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣಗಳ ಪೈಕಿ ಶೇ.80ರಷ್ಟು ಸೋಂಕು ಪ್ರಕರಣಗಳು ಕೇವಲ 10 ರಾಜ್ಯಗಳಿಂದ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 2,17,353 ಸೋಂಕು ಪ್ರಕರಣಗಳು ವರದಿಯಾಗಿದ್ದು, 1,185 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1,42,91,917ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು  1,185 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ  ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 1,74,308ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,18,302 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,25,47,866ಕ್ಕೆ ತಲುಪಿದೆ. ಅಂತೆಯೇ ಸಕ್ರಿಯ ಪ್ರಕರಣಗಳ ಸಂಖ್ಯೆ ದಾಖಲೆಯ 15,69,743ಕ್ಕೆ ಏರಿಕೆಯಾಗಿದೆ.

10 ರಾಜ್ಯಗಳಲ್ಲಿ ಶೇ.80ರಷ್ಟು ಸೋಂಕಿತರು
ಇನ್ನು ಇಂದು ಪತ್ತೆಯಾದ 2,17,353 ಸೋಂಕು ಪ್ರಕರಣಗಳ ಪೈಕಿ ಶೇ.79.10ರಷ್ಟು ಸೋಂಕು ಪ್ರಕರಣಗಳು ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ, ಛತ್ತೀಸ್‌ಗಢ, ಕರ್ನಾಟಕ, ಮಧ್ಯಪ್ರದೇಶ, ಗುಜರಾತ್, ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಈ 10 ರಾಜ್ಯಗಳಲ್ಲಿ ಶೇ.80ರಷ್ಟು ಸೋಂಕು  ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಗರಿಷ್ಠ ಅಂದರೆ 61,695 ಸೋಂಕು ಪ್ರಕರಣಗಳು ವರದಿಯಾಗಿದ್ದು, 2ನೇ ಸ್ಥಾನದಲ್ಲಿರುವ ಉತ್ತರ ಪ್ರದೇಶದಲ್ಲಿ 22,339 ಸೋಂಕು ಪ್ರಕರಣಗಳು ವರದಿಯಾಗಿವೆ. ರಾಜಧಾನಿ ದೆಹಲಿಯಲ್ಲಿ 16,699 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. 

ಭಾರತದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಮಹಾರಾಷ್ಟ್ರ, ಛತ್ತೀಸ್‌ಗಢ, ಉತ್ತರ ಪ್ರದೇಶ, ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿಯೇ ಒಟ್ಟು ಶೇ.65.86 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ ಮಾತ್ರವೇ ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಶೇ.39.60 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಒಟ್ಟಾರೆ ಸಾವಿನ ಸಂಖ್ಯೆಯಲ್ಲಿ ಹತ್ತು ರಾಜ್ಯಗಳ ಪಾಲೇ ಶೇ. 85.40ರಷ್ಟು
ಇನ್ನು ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲಾದ ಕೋವಿಡ್ ಸೋಂಕಿತರ ಸಾವಿನ ಪೈಕಿ 10 ರಾಜ್ಯಗಳ ಪಾಲೇ ಶೇ. 85.40ರಷ್ಟಿದೆ. ಮಹಾರಾಷ್ಟ್ರದಲ್ಲಿ ಗರಿಷ್ಠ ಸಾವುಗಳು ದಾಖಲಾಗಿದ್ದು, ಇಲ್ಲಿ 349 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಛತ್ತೀಸ್‌ಗಢದಲ್ಲಿ 135 ಮಂದಿ ಸಾವನ್ನಪ್ಪಿದ್ದಾರೆ.

ಅಚ್ಚರಿ ಎಂದರೆ ಕಳೆದ 24 ಗಂಟೆಗಳ ಅವಧಿಯಲ್ಲಿ ಲಡಾಖ್, ತ್ರಿಪುರ, ಮೇಘಾಲಯ, ಸಿಕ್ಕಿಂ, ನಾಗಾಲ್ಯಾಂಡ್, ಮಿಜೋರಾಂ, ಮಣಿಪುರ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅರುಣಾಚಲ ಪ್ರದೇಶಗಳಲ್ಲಿ ಯಾವುದೇ ಕೋವಿಡ್ ಸೋಂಕಿತರು ಸಾವನ್ನಪ್ಪಿಲ್ಲ. 

11.72 ಕೋಟಿ ಡೋಸ್ ಲಸಿಕೆ ವಿತರಣೆ
ಮತ್ತೊಂದೆಡೆ, ವಿಶ್ವದ ಅತಿದೊಡ್ಡ ಕೊರೊನಾವೈರಸ್ ವ್ಯಾಕ್ಸಿನೇಷನ್ ಯೋಜನೆ ಭಾಗವಾಗಿ ದೇಶದಲ್ಲಿ ನೀಡಲಾಗುತ್ತಿರುವ ಕೋವಿಡ್ ಲಸಿಕೆ ಪ್ರಮಾಣಗಳ 11.72 ಕೋಟಿ ಡೋಸ್ ಗೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಈ ವರೆಗೂ ಒಟ್ಟಾರೆಯಾಗಿ,  11,72,23,509 ಡೋಸ್ ಲಸಿಕೆಯನ್ನು ನೀಡಲಾಗಿದೆ.  ಈ ಪೈಕಿ 90,82,999 ಮೊದಲ ಡೋಸ್ ಆರೋಗ್ಯ ಕಾರ್ಯಕರ್ತರಿಗೆ (ಎಚ್‌ಸಿಡಬ್ಲ್ಯು), 56,34,634 2ನೇ ಡೋಸ್ ಎಚ್‌ಸಿಡಬ್ಲ್ಯೂ ಕಾರ್ಯಕರ್ತರಿಗೆ ನೀಡಲಾಗಿದೆ. ಅಂತೆಯೇ 1,02,93,524 ಮುಂಚೂಣಿ ಕಾರ್ಯಕರ್ತರಿಗೆ ಮೊದಲ  ಡೋಸ್ ಮತ್ತು 51,52,891 ಎಫ್‌ಎಲ್‌ಡಬ್ಲ್ಯೂಗಳು ಎರಡನೇ ಡೋಸ್ ನೀಡಲಾಗಿದೆ. 

ಅಲ್ಲದೆ, 60 ವರ್ಷಕ್ಕಿಂತ ಮೇಲ್ಪಟ್ಟ 4,42,30,842 ಮಂದಿಗೆ ಮೊದಲ ಡೋಸ್ ಮತ್ತು 30,97,961 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 45 ರಿಂದ 60 ವರ್ಷ ವಯಸ್ಸಿನ 3,87,41,890 ಮತ್ತು 98,876 ಫಲಾನುಭವಿಗಳು ಕ್ರಮವಾಗಿ ಮೊದಲ ಮತ್ತು ಎರಡನೆಯ ಪ್ರಮಾಣವನ್ನು ನೀಡಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com