ಅಕ್ರಮವಾಗಿ ರೆಮ್‌ಡಿಸಿವಿರ್‌ ಚುಚ್ಚುಮದ್ದು ಮಾರಾಟ; ಮೂವರ ಬಂಧನ

ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್‌ಡಿಸಿವಿರ್‌ ಚುಚ್ಚು ಮದ್ದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವೈದ್ಯಕೀಯ ಸಿಬ್ಬಂದಿಗಳನ್ನು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‌

Published: 16th April 2021 11:39 AM  |   Last Updated: 16th April 2021 11:39 AM   |  A+A-


Remdesivir-injection

ರೆಮ್‌ಡಿಸಿವಿರ್‌ ಚುಚ್ಚುಮದ್ದು

Posted By : Srinivasamurthy VN
Source : PTI

ಕಾನ್ಪುರ: ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್‌ಡಿಸಿವಿರ್‌ ಚುಚ್ಚು ಮದ್ದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವೈದ್ಯಕೀಯ ಸಿಬ್ಬಂದಿಗಳನ್ನು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‌

ಕಾನ್ಪುರದಲ್ಲಿ ರೆಮ್‌ಡಿಸಿವಿರ್‌ ಚುಚ್ಚು ಮದ್ದನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಮೇರೆಗೆ ದಾಳಿಗಿಳಿದಿದ್ದ ಉತ್ತರ ಪ್ರದೇಶ ಪೊಲೀಸ್ ವಿಶೇಷ ಕಾರ್ಯಪಡೆ ಅಧಿಕಾರಿಗಳು ಇಂದು ಪ್ರಶಾಂತ್ ಶುಕ್ಲಾ ಮತ್ತು ನೌಬಸ್ತಾ ನಿವಾಸಿ ಮೋಹನ್ ಸೋನಿ ಮತ್ತು ಹರಿಯಾಣದ  ಸಚಿನ್ ಕುಮಾರ್ ಎಂಬುವವರನ್ನು ಬಂಧಿಸಿದ್ದಾರೆ. ಕಾನ್ಪುರ ಪೊಲೀಸರು ಮತ್ತು ಎಸ್‌ಟಿಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ರೆಮ್‌ಡಿಸಿವಿರ್ ಚುಚ್ಚುಮದ್ದಿನ 265 ಶೀಷೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಟಿಎಫ್‌ ಹಿರಿಯ ಅಧಿಕಾರಿಯೊಬ್ಬರು  ತಿಳಿಸಿದ್ದಾರೆ.

ಈ ಬಗ್ಗೆ ಎಸ್‌ಟಿಎಫ್ ಹೇಳಿಕೆ ಬಿಡುಗಡೆ ಮಾಡಿದ್ದು, ಬಂಧಿತರು ಕಿಮ್ವಾಯ್ ನಗರದಲ್ಲಿ ರೆಮ್‌ಡಿಸಿವಿರ್‌ ಚುಚ್ಚುಮದ್ದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ತಿಳಿಸಿದೆ. ಬಂಧಿತರ ಬಳಿ ರೆಮ್‌ಡಿಸಿವಿರ್‌ ಚುಚ್ಚು ಮದ್ದುಗಳನ್ನು ಖರೀದಿಸಿದ್ದಕ್ಕೆ ಬಿಲ್ ಇರಲಿಲ್ಲ. ಹಾಗೆಯೇ, ವಶಪಡಿಸಿಕೊಂಡ  ಶೀಷೆಗಳ ಮೇಲಿದ್ದ ಬ್ಯಾಚ್ ಸಂಖ್ಯೆ ಕಾಣೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದು, ಈ ಕಾಳಸಂತೆಯ ಜಾಲವನ್ನು ಪತ್ತೆ ಮಾಡಲು ಮೂವರ ಮೊಬೈಲ್‌ ಫೋನ್‌ ಕರೆಗಳ ವಿವರವನ್ನು ಸಂಗ್ರಹಿಸುತ್ತಿರುವುದಾಗಿ ಕಾನ್ಪುರದ ದಕ್ಷಿಣ ಉಪ ಪೊಲೀಸ್ ಆಯುಕ್ತ ರವೀನಾ ತ್ಯಾಗಿ ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧ ಬಾಬುಪುರ್ವಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.


Stay up to date on all the latest ರಾಷ್ಟ್ರೀಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp