ಬಂಗಾಳದಲ್ಲಿ ಕೊರೋನಾ ಹೆಚ್ಚಳಕ್ಕೆ ಬಿಜೆಪಿಯೇ ಹೊಣೆ, ಹೊರಗಿನವರ ಪ್ರವೇಶ ನಿಷೇಧಿಸಿ: ಇಸಿಗೆ ಮಮತಾ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಲು ಬಿಜೆಪಿಯೇ ಕಾರಣ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣಾ ಪ್ರಚಾರದ ಸಮಯದಲ್ಲಿ ಕೇಸರಿ ಪಕ್ಷ "ಹೊರಗಿನವರನ್ನು" ಕರೆತರುವುದನ್ನು ತಡೆಯಬೇಕು ಎಂದು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ನಬಾದ್ವಿಪ್: ಪಶ್ಚಿಮ ಬಂಗಾಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಲು ಬಿಜೆಪಿಯೇ ಕಾರಣ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣಾ ಪ್ರಚಾರದ ಸಮಯದಲ್ಲಿ ಕೇಸರಿ ಪಕ್ಷ "ಹೊರಗಿನವರನ್ನು" ಕರೆತರುವುದನ್ನು ತಡೆಯಬೇಕು ಎಂದು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

ನಾಡಿಯಾ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿಸಲು ಬಿಜೆಪಿ ಕೊರೋನಾ ಪೀಡಿತ ಗುಜರಾತ್‌ನಂತಹ ರಾಜ್ಯಗಳಿಂದ ಜನರನ್ನು ಕರೆತರುತ್ತಿದೆ ಎಂದಿದ್ದಾರೆ.

"ಬಂಗಾಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿರುವ ಗುಜರಾತ್ ನಂತಹ ರಾಜ್ಯಗಳಿಂದ ಬರುವ ಜನರಿಗೆ ಪ್ರವೇಶ ನಿಷೇಧಿಸಬೇಕು ಎಂದು ನಾನು ಚುನಾವಣಾ ಆಯೋಗಕ್ಕೆ ಒತ್ತಾಯಿಸುತ್ತೇವೆ ಎಂದಿದ್ದಾರೆ.

"ಪ್ರಧಾನಿ ಮೋದಿ ಅಥವಾ ಇತರ ನಾಯಕರು ಪ್ರಚಾರಕ್ಕಾಗಿ ಬಂದರೆ ನಾವು ಏನನ್ನೂ ಹೇಳುವುದಿಲ್ಲ. ಆದರೆ ಬಿಜೆಪಿ ಕೊರೋನಾ ಪೀಡಿತ ರಾಜ್ಯಗಳ ಜನರನ್ನು ರ್ಯಾಲಿಗಳಿಗೆ ಕರೆತರುತ್ತಿರುವುದು ಏಕೆ?" ಎಂದು ದೀದಿ ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com