ಕೋವಿಡ್-19: ಕೋವಾಕ್ಸಿನ್ ಲಸಿಕೆ ಉತ್ಪಾದಿಸಲು ಮುಂಬೈ ಮೂಲದ ಹಾಫ್ ಕಿನ್ ಸಂಸ್ಥೆಗೆ ಅನುಮತಿ

ಕೋವಾಕ್ಸಿನ್ ಲಸಿಕೆ ಉತ್ಪಾದಿಸಲು ಮುಂಬೈ ಮೂಲದ ಹಾಫ್ ಕಿನ್ ಸಂಸ್ಥೆಗೆ  ಕೇಂದ್ರ ಸರ್ಕಾರ ಗುರುವಾರ ಅನುಮತಿ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಕೋವಾಕ್ಸಿನ್ ಲಸಿಕೆ ಉತ್ಪಾದಿಸಲು ಮುಂಬೈ ಮೂಲದ ಹಾಫ್ ಕಿನ್ ಸಂಸ್ಥೆಗೆ  ಕೇಂದ್ರ ಸರ್ಕಾರ ಗುರುವಾರ ಅನುಮತಿ ನೀಡಿದೆ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ದೃಷ್ಟಿಯಲ್ಲಿ  ಲಸಿಕೆ ಉತ್ಪಾದನೆ ಆರಂಭಿಸಲು ಹಾಫ್ ಕಿನ್ ಸಂಸ್ಥೆಗೆ ಅನುಮತಿ ನೀಡುವಂತೆ  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪತ್ರ ಬರೆದಿದ್ದರು.

ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಾಂತ್ರಿಕ ಇಲಾಖೆ ಕಾರ್ಯದರ್ಶಿ ರೇಣು ಸ್ವರೂಪ್ ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರಿಗೆ ಬರೆದಿರುವ ಪತ್ರದಲ್ಲಿ ದೇಶದ ಹಳೆಯ ಸಂಸ್ಥೆಗಳಲ್ಲಿ ಒಂದಾದ ಹಾಫ್ ಕಿನ್ಸ್ ಸಂಸ್ಥೆ ಲಸಿಕೆ ಉತ್ಪಾದಿಸಲು ಅನುಮತಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಲಸಿಕೆಗಳನ್ನು ಉತ್ಪಾದಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಒಂದು ವರ್ಷದವರೆಗೆ ಅನುಮತಿ ನೀಡಿದೆ.

ನಿಗದಿತ ಸಮಯದಲ್ಲಿ ಲಸಿಕೆ ಮೇಲ್ವಿಚಾರಣೆ ಮತ್ತು ಉತ್ಪಾದನೆಗೆ ಹಿರಿಯ ಸರ್ಕಾರಿ ಅಧಿಕಾರಿಯ ನೇಮಕವನ್ನು ಖಚಿತಪಡಿಸಿಕೊಳ್ಳಲು ಠಾಕ್ರೆ ಮುಖ್ಯ ಕಾರ್ಯದರ್ಶಿಯನ್ನು ಕೇಳಿದ್ದಾರೆ.  ಕೋವಿಡ್ ವಿರುದ್ಧದ ಹೋರಾಟದಲ್ಲಿ ಶೀಘ್ರ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com