ಕೊರೋನಾ ಉಲ್ಬಣ: 18 ವರ್ಷ ಮೇಲ್ಪಟ್ಟ ಎಲ್ಲರಿಗೆ ಲಸಿಕೆ ಒದಗಿಸಿ; ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್

ದೇಶಾದ್ಯಂತ ಕೊರೋನಾವೈರಸ್ ಪ್ರಕರಣಗಳಲ್ಲಿ ಹಠಾತ್ ಏರಿಕೆ ಕಂಡುಬಂದ ಕಾರಣ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್)ಯೊಂದು ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿದೆ.

Published: 16th April 2021 12:01 PM  |   Last Updated: 16th April 2021 12:50 PM   |  A+A-


ಸಂಗ್ರಹ ಚಿತ್ರ

Posted By : Raghavendra Adiga
Source : ANI

ನಚದೆಹಲಿ: ದೇಶಾದ್ಯಂತ ಕೊರೋನಾವೈರಸ್ ಪ್ರಕರಣಗಳಲ್ಲಿ ಹಠಾತ್ ಏರಿಕೆ ಕಂಡುಬಂದ ಕಾರಣ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್)ಯೊಂದು ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿದೆ.

ಎರಡನೇ ಅಲೆಯಲ್ಲಿ ಕೊರೋನಾ ಉಲ್ಬಣವನ್ನು ನಿಯಂತ್ರಿಸಲು ಎಲ್ಲಾ ಯುವಜನತೆ ಹಾಗೂ ದುಡಿಯುವ ವರ್ಗಕ್ಕೆ ವ್ಯಾಪಕವಾದ ಲಸಿಕೆ ಅಗತ್ಯ ಎಂದು ವಕೀಲರಾದ ರಶ್ಮಿ ಸಿಂಗ್ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ಆಡಳಿತವು ಲಸಿಕೆಯ ಎರಡು ಡೋಸ್ ಗಳನ್ನು ನೀಡುವುದಕ್ಕಾಗಿ ಆರರಿಂದ ಎಂಟು ವಾರಗಳ ಅವಧಿ ತೆಗೆದುಕೊಳ್ಳುತ್ತಿದೆ. ಇದರಿಂದಾಗಿ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಲಸಿಕೆ ಪಡೆಯುವುದಕ್ಕೆ ವಿಳಂಬವಾಗುವುದಲ್ಲದೆ  ಆ ವೇಳೆಗೆ ಕೋವಿಡ್ 19 ವೈರಸ್ ವೇಗವಾಗಿ ಹರಡಬಹುದು ಎಂದು ಮನವಿಯಲ್ಲಿ ಕಳವಳ ವ್ಯಕ್ತಪಡಿಸಿಅಲಾಗಿದೆ.

18-45 ವರ್ಷ ವಯಸ್ಸಿನವರಿಗೆ ಲಸಿಕೆಗಳನ್ನು ನಿರಾಕರಿಸುವುದು ಅನಿಯಂತ್ರಿತ, "ತಾರತಮ್ಯ ಮತ್ತು ಅವಿವೇಕ"ದ ನಿರ್ಧಾರ ಎಂದು ಮನವಿಯಲ್ಲಿ ತಿಳಿಸಲಾಗಿದೆ, ಇಂತಹ ನಿರಾಕರಣೆಯು ಆರೋಗ್ಯದ ಹಕ್ಕನ್ನು ಮತ್ತು ಜೀವನ ಹಕ್ಕನ್ನು ಉಲ್ಲಂಘಿಸುತ್ತದೆ. ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸೇರಿದಂತೆ ಹಲವಾರು ತಜ್ಞರು ಕೋವಿಡ್ -19 ವ್ಯಾಕ್ಸಿನೇಷನ್ ಅನ್ನು ಹೆಚ್ಚಿಸಲು ಒತ್ತಾಯಿಸಿದ್ದಾರೆ ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಭಾರತವು ಪ್ರತಿದಿನ ಕನಿಷ್ಠ 10 ಮಿಲಿಯನ್ ಡೋಸ್‌ಗಳನ್ನು ನೀಡುವ ಅಗತ್ಯವಿದೆ ಎಂದು ಕೆಲವು ತಜ್ಞರು ಸಲಹೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. 

ಪ್ರಸ್ತುತ ಕೇಂದ್ರ ಸರ್ಕಾರವು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ಲಭ್ಯವಾಗುವಂತೆ ನಿಯಮ ರೂಪಿಸಿದೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp