ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂದುವರೆದ ಕೊರೋನಾ ಆರ್ಭಟ: ರಾಜ್ಯದಲ್ಲಿ ಇಂದು 80 ಬಲಿ, ಬೆಂಗಳೂರಿನಲ್ಲಿ 11,404 ಸೇರಿ 17,489 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಶನಿವಾರ ಬರೋಬ್ಬರಿ 17,489 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11,41,998ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಶನಿವಾರ ಬರೋಬ್ಬರಿ 17,489 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11,41,998ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 80 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 13,270ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 11404 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,33,842ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 43 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 5565 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,09,549ಕ್ಕೆ ಏರಿಕೆಯಾಗಿದೆ. ಇನ್ನು 1,19,160 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 589 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com