ಗಣರಾಜ್ಯದಿನದ ಹಿಂಸಾಚಾರ ಪ್ರಕರಣ: ನಟ ದೀಪ್ ಸಿಧುಗೆ ಜಾಮೀನು

ಜನವರಿ 26ರ ಹಿಂಸಾಚಾರ ಪ್ರಕರಣದ ಆರೋಪಿ ದೀಪ್ ಸಿಧುಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.

Published: 17th April 2021 11:52 AM  |   Last Updated: 17th April 2021 11:52 AM   |  A+A-


ದೀಪ್ ಸಿಧು

Posted By : Raghavendra Adiga
Source : Online Desk

ನವದೆಹಲಿ: ಜನವರಿ 26ರ ಹಿಂಸಾಚಾರ ಪ್ರಕರಣದ ಆರೋಪಿ ದೀಪ್ ಸಿಧುಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.

ಕಳೆದ ವಿಚಾರಣೆಯ ವೇಳೆ, ಜನವರಿ 26ರಂದು ಕೆಂಪು ಕೋಟೆಗೆ ಹೋಗುವಂತೆ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ನಾನು ಯಾವುದೇ ಕರೆ ನೀಡಿಲ್ಲ ಎಂದು ದೀಪ್ ಸಿಧು ನ್ಯಾಯಾಲಯಕ್ಕೆ ತಿಳಿಸಿದ್ದರು.

ಸಿಧು ಅವರು ಪ್ರತಿಭಟನೆಗಾಗಿ ಕರೆ ನೀಡಿದ್ದಕ್ಕೆ, ಜನಸಮೂಹವನ್ನು ಪ್ರತಿಭಟನೆಯಲ್ಲಿ ತೊಡಗುವಂತೆ ಮಾಡಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಅವರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದರು. ಅಲ್ಲದೆ ಸಿಧು ಯಾವ ರೈತ ಮುಖಂಡ, ರೈತ ಸಂಘದ ಸದಸ್ಯರಲ್ಲ ಎಂದು ಅವರ ಪರ ವಕೀಲರು ಹೇಳಿದ್ದಾರೆ.

ಸಿಧು ಅವರು ಫೇಸ್‌ಬುಕ್‌ನಲ್ಲಿ ವೀಡಿಯೊ ಪೋಸ್ಟ್ ಮಾಡುವಲ್ಲಿ ತಪ್ಪು ಮಾಡಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ ಮತ್ತು ಅದು ಅಪರಾಧವಲ್ಲ ಎಂದು ವಾದಿಸಿದ ವಕೀಲ ಹೇಳಿದ್ದಾರೆ . "ನಾನು ವೀಡಿಯೊವನ್ನು ಪೋಸ್ಟ್ ಮಾಡಿದ್ದೇನೆ, ಅದು ನನ್ನ ತಪ್ಪು. ಪ್ರತಿಯೊಂದು ತಪ್ಪೂ ಅಪರಾಧವಲ್ಲ. ನಾನು ವಿಡಿಯೋ ಪೋಸ್ಟ್ ಮಾಡಿದ ಕಾರಣ ಮಾಧ್ಯಮಗಳು ನನ್ನನ್ನು ಮುಖ್ಯ ಆರೋಪಿ ಎಂದು ಹೆಸರಿಸಿದೆ. ನನ್ನನ್ನು ಮುಖ್ಯ ಸಂಚುಕೋರನಾಗಿ ಮಾಧ್ಯಮಗಳು ಬಿಂಬಿಸಿದ್ದವು. ಅವು ಹಾಗೇಕೆ ಮಾಡಿದವೆಂದು ನನಗೆ ಅರಿವಿಲ್ಲ" ಏಪ್ರಿಲ್ 8 ರಂದು ಜಾಮೀನು ಅರ್ಜಿಯ ಸಂದರ್ಭದಲ್ಲಿ ಸಿಧು ತನ್ನ ವಕೀಲರ ಮೂಲಕ ನ್ಯಾಯಾಲಯಕ್ಕೆ ತಿಳಿಸಿದ್ದರು.

ಗಣರಾಜ್ಯೋತ್ಸವದಂದು ನಡೆದ ಕೆಂಪು ಕೋಟೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಧು ಅವರನ್ನು ಫೆಬ್ರವರಿಯಲ್ಲಿ ದೆಹಲಿ ಪೊಲೀಸರ ವಿಶೇಷ ಕೋಶ ಬಂಧಿಸಿತ್ತು. ಜನಸಮೂಹವನ್ನು ಪ್ರಚೋದಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಬೇಕಾದವರಾಗಿದ್ದಾರೆ.

ಪ್ರತಿಭಟನಾ ನಿರತ ರೈತರು ಜನವರಿ 26 ರಂದು ಟ್ರಾಕ್ಟರ್ ಮೆರವಣಿಗೆ ನಡೆಸಲು ಕರೆ ನೀಡಿದ್ದರು. ಅವರಿಗೆ ದೆಹಲಿ ಪೊಲೀಸರು ಅನುಮತಿಸಿದ ಮಾರ್ಗವನ್ನು ನೀಡಿದ್ದರು ಆದರೆ ಒಂದು ಬಣವು ಆ ಅನುಮತಿಸಿದ ಮಾರ್ಗಕ್ಕೆ ಬದಲು ಮೂಲ ಕಾರ್ಯಕ್ರಮದ ಭಾಗವಾಗಿರದ ಕೆಂಪು ಕೋಟೆಗೆ ನುಗ್ಗಿತು.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp