ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ, ರೈಲಿನಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸದಿದ್ದರೆ 500 ರೂ. ವರೆಗೆ ದಂಡ: ಇಲಾಖೆ ಎಚ್ಚರಿಕೆ

ಕೊರೋನಾ ಸೋಂಕು ನಿಯಂತ್ರಣಕ್ಕೆ ಭಾರತೀಯ ರೈಲ್ವೆ ಇಲಾಖೆ ಕೂಡ ಹಲವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

Published: 17th April 2021 02:07 PM  |   Last Updated: 17th April 2021 03:12 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : PTI

ನವದೆಹಲಿ: ಕೊರೋನಾ ಸೋಂಕು ನಿಯಂತ್ರಣಕ್ಕೆ ಭಾರತೀಯ ರೈಲ್ವೆ ಇಲಾಖೆ ಕೂಡ ಹಲವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ರೈಲುಗಳಲ್ಲಿ ಪ್ರಯಾಣಿಸುವಾಗ ಮತ್ತು ರೈಲ್ವೆ ನಿಲ್ದಾಣದ ಆವರಣದಲ್ಲಿ ಮಾಸ್ಕ್ ಧರಿಸದವರಿಗೆ 500 ರೂಪಾಯಿಯವರೆಗೆ ದಂಡ ವಿಧಿಸಲು ಇಲಾಖೆ ನಿರ್ಧರಿಸಿದೆ. ಮಾಸ್ಕ್ ಧರಿಸುವ ಆದೇಶವನ್ನು ಮುಂದಿನ ಆದೇಶದವರೆಗೆ 6 ತಿಂಗಳವರೆಗೆ ಜಾರಿಗೆ ತರಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ಈ ಮಧ್ಯೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಇತ್ತೀಚೆಗೆ ಕೋವಿಡ್-19 ಮಾರ್ಗಸೂಚಿಯನ್ನು ಹೊರಡಿಸಿತ್ತು. ರೈಲ್ವೆಯಲ್ಲಿ ಪ್ರಯಾಣಿಸುವವರು, ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಒಯ್ಯಬೇಕಾಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚೆಗೆ ಹೊರಡಿಸಿರುವ ಕೋವಿಡ್-19 ಮಾರ್ಗಸೂಚಿ ಮತ್ತು ಶಿಷ್ಟಾಚಾರಗಳನ್ನು ಪಾಲಿಸುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ. 

ಕೋವಿಡ್-19 ಸಾಂಕ್ರಾಮಿಕ ಮತ್ತು ಸಂಬಂಧಪಟ್ಟ ಸ್ವಚ್ಛತೆಗೆ ಸಂಬಂಧಿಸಿದಂತೆ ರೈಲ್ವೆಗಳಲ್ಲಿ ಬೇಯಿಸಿದ ಆಹಾರದ ಬದಲಿಗೆ ಸಿದ್ಧಪಡಿಸಿದ ಪ್ಯಾಕೇಜ್ ಮಾಡಿದ ಆಹಾರ ನೀಡಲು ಮಾರ್ಗಸೂಚಿ ಹೊರಡಿಸಲಾಗಿದೆ. ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಮತ್ತು ಟೇಕ್ ಎವೆ ಕಿಟ್ ವಸ್ತುಗಳು ಮಾರಾಟಕ್ಕೆ ಸಿಗುವಂತೆ ಮಾಡಲಾಗಿದೆ, ರೈಲ್ವೆ ಸ್ಟೇಷನ್ ಗಳಲ್ಲಿ ಬಹೂಪಯೋಗಿ ಸ್ಟಾಲ್ ಗಳನ್ನು ಇಡಲಾಗಿದೆ.

ರೈಲ್ವೆ ಇಲಾಖೆ ಪ್ರಸ್ತುತ ದೇಶದಲ್ಲಿ ಸರಾಸರಿ 1402 ವಿಶೇಷ ರೈಲುಗಳ ಸಂಚಾರ ಮಾಡುತ್ತಿದೆ. ಒಟ್ಟು 5 ಸಾವಿರದ 381 ಉಪ ನಗರ ರೈಲು ಸೇವೆಗಳು ಮತ್ತು 830 ಪ್ರಯಾಣಿಕ ರೈಲುಗಳು ಸಂಚರಿಸುತ್ತಿವೆ. ಇದಲ್ಲದೆ, ಹೆಚ್ಚಿನ ಪ್ರೋತ್ಸಾಹದೊಂದಿಗೆ ಹೆಚ್ಚು ವಿಶೇಷ ರೈಲುಗಳ ತದ್ರೂಪುಗಳಾಗಿ 28 ವಿಶೇಷ ರೈಲುಗಳನ್ನು ನಡೆಸಲಾಗುತ್ತಿದೆ ಎಂದು ರೈಲ್ವೆ ಹೇಳಿದೆ.

ಕೇಂದ್ರ ರೈಲ್ವೆಯಲ್ಲಿ 58 ರೈಲುಗಳು (29 ಜೋಡಿ) ಮತ್ತು ಪಶ್ಚಿಮ ರೈಲ್ವೆ 60 ರೈಲುಗಳೊಂದಿಗೆ (30 ಜೋಡಿ) ತೆರವುಗೊಳಿಸಲು ಹೆಚ್ಚುವರಿ ರೈಲುಗಳನ್ನು 2021ರ ಏಪ್ರಿಲ್-ಮೇ ಅವಧಿಯಲ್ಲಿ ನಡೆಸಲಾಗುತ್ತಿದೆ. ಈ ರೈಲುಗಳು ಗೋರಖ್‌ಪುರ, ಪಾಟ್ನಾ, ದರ್ಬಂಗಾ, ವಾರಣಾಸಿ, ಗುವಾಹಟಿ, ಬಾರೌನಿ, ಪ್ರಯಾಗರಾಜ್, ಬೊಕಾರೊ, ರಾಂಚಿ ಮತ್ತು ಲಕ್ನೋ ಮುಂತಾದ ಸ್ಥಳಗಳಲ್ಲಿ ಹೆಚ್ಚಿನ ಬೇಡಿಕೆಯಿದೆ.

Stay up to date on all the latest ರಾಷ್ಟ್ರೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp