ಆರ್‌ಎಸ್‌ಪಿ ಅಭ್ಯರ್ಥಿ ನಿಧನ, ಪಶ್ಚಿಮ ಬಂಗಾಳದ ಜಂಗೀಪುರ ಕ್ಷೇತ್ರದ ಚುನಾವಣೆ ಮುಂದೂಡಿಕೆ

ಪಶ್ಚಿಮ ಬಂಗಾಳ ವಿಧಾನಸಭೆಗೆ ಶನಿವಾರ ಐದನೇ ಹಂತದ ಮತದಾನ ನಡೆಯುತ್ತಿದ್ದು, ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಅಭ್ಯರ್ಥಿಯ ಸಾವಿನ ನಂತರ ಚುನಾವಣಾ ಆಯೋಗ ಜಂಗಿಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆಗೆ ಶನಿವಾರ ಐದನೇ ಹಂತದ ಮತದಾನ ನಡೆಯುತ್ತಿದ್ದು, ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಅಭ್ಯರ್ಥಿಯ ಸಾವಿನ ನಂತರ ಚುನಾವಣಾ ಆಯೋಗ ಜಂಗಿಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಿದೆ.

ಜನ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳ ಪ್ರಕಾರ, ಮಾನ್ಯತೆ ಪಡೆದ ಪಕ್ಷದ ಅಭ್ಯರ್ಥಿಯೊಬ್ಬರು ಮೃತಪಟ್ಟರೆ, ಪಕ್ಷವು ಹೊಸ ಅಭ್ಯರ್ಥಿಯನ್ನು ನಿರ್ಧರಿಸಲು ಅನುವು ಮಾಡಿಕೊಡಲು ಮತದಾನವನ್ನು ಮುಂದೂಡಲಾಗುತ್ತದೆ.

ಆರ್‌ಎಸ್‌ಪಿ ಅಭ್ಯರ್ಥಿಯ ಸಾವಿನಿಂದಾಗಿ ಏಪ್ರಿಲ್ 26 ರಂದು ನಿಗದಿಯಾಗಿದ್ದ ಮುರ್ಷಿದಾಬಾದ್‌ನ 58 ಜಂಗೀಪುರ ಎಸಿ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗದ ವಕ್ತಾರರು ತಿಳಿಸಿದ್ದಾರೆ.

ಚುನಾವಣಾ ಆಯೋಗವು ಮುಂದಿನ ದಿನಗಳಲ್ಲಿ ಜಂಗೀಪುರ ಕ್ಷೇತ್ರದ ಹೊಸ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಾಲ್ಕು ದಿನಗಳ ಹಿಂದೆ ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಪ್ರದೀಪ್ ಕುಮಾರ್ ನಂದಿ ಅವರು ಶುಕ್ರವಾರ ಕೊರೋನಾ ವೈರಸ್ ನಿಂದ ಬೆರ್ಹಾಂಪೋರ್‌ನ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com