ಮೋದಿ ಜತೆ ಫೋನ್‌ನಲ್ಲಿ ಆಕ್ಸಿಜನ್ ಸಮಸ್ಯೆ ಚರ್ಚಿಸಲು ಯತ್ನಿಸಿದೆ, ಆದರೆ ಅವರು ಚುನಾವಣೆಯಲ್ಲಿ ಬ್ಯುಸಿ: ಉದ್ಧವ್ ಠಾಕ್ರೆ

ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದೆ. ಆದರೆ ಅವರು ಪಶ್ಚಿಮ ಬಂಗಾಳ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದರಿಂದ...
ಮೋದಿ-ಉದ್ಧವ್ ಠಾಕ್ರೆ
ಮೋದಿ-ಉದ್ಧವ್ ಠಾಕ್ರೆ

ಮುಂಬೈ: ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದೆ. ಆದರೆ ಅವರು ಪಶ್ಚಿಮ ಬಂಗಾಳ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದರಿಂದ ಪ್ರಧಾನಿಯನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.

ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೈಗಾರಿಕೋದ್ಯಮಿಗಳು ಮತ್ತು ಎಫ್‌ಐಸಿಸಿಐ, ಸಿಐಐನಂತಹ ವಾಣಿಜ್ಯ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಕೇಂದ್ರ, ಮಹಾರಾಷ್ಟ್ರ ಸರ್ಕಾರದೊಂದಿಗೆ ಸಹಕರಿಸುತ್ತಿದೆ ಎಂದು ಹೇಳಿದರು.

ಮಹಾರಾಷ್ಟ್ರಕ್ಕೆ ಆಮ್ಲಜನಕದ ಪೂರೈಕೆ ಹೆಚ್ಚಿಸುವ ಅಗತ್ಯ ಇದೆ. ಉತ್ಪತ್ತಿಯಾಗುವ ಎಲ್ಲಾ ಆಮ್ಲಜನಕವನ್ನು ವೈದ್ಯಕೀಯ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ ಎಂದು ಉದ್ಧವ್ ಠಾಕ್ರೆ ಹೇಳಿದರು.

ಆಮ್ಲಜನಕದ ಪೂರೈಕೆಯ ಅಗತ್ಯತೆಯ ಬಗ್ಗೆ ಚರ್ಚಿಸಲು ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ಸಂಪರ್ಕಿಸಲು ಯತ್ನಿಸಿದೆ. ಆದರೆ ಅವರು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ನಿರತರಾಗಿದ್ದರಿಂದ ಫೋನ್‌ನಲ್ಲಿ ಮಾತನಾಡಲು ಸಾಧ್ಯವಾಗಲಿಲ್ಲ ಎಂದರು.

ಇದಕ್ಕು ಮುನ್ನ, ರಾಜ್ಯದಲ್ಲಿ ಆಮ್ಲಜನಕದ ಲಭ್ಯತೆಯ ಕುರಿತು ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ಮಹಾರಾಷ್ಟ್ರ ದೇಶದಲ್ಲಿಯೇ ಅತಿ ಹೆಚ್ಚು ಪ್ರಮಾಣದ ಆಮ್ಲಜನಕವನ್ನು ಪಡೆದಿದೆ ಮತ್ತು ಅದರ ಮೌಲ್ಯಮಾಪನ ಮಾಡಲು ಕೇಂದ್ರವು ರಾಜ್ಯ ಸರ್ಕಾರಗಳೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com