ಕೋವಿಡ್-19 ರೋಗಿಗಳಿಗೆ ಆದ್ಯತೆ: ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆಗೆ ಕೇಂದ್ರದ ನಿರ್ಬಂಧ

ಕೋವಿಡ್-19 ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ಕೇಂದ್ರ ಸರ್ಕಾರ ಕೈಗಾರಿಕೆಗಳಿಗೆ ಆಮ್ಲ ಜನಕ ಪೂರೈಕೆ ಮಾಡುವುದನ್ನು ನಿರ್ಬಂಧಿಸಿದೆ. 
ಕೋವಿಡ್-19 ರೋಗಿಗಳಿಗಾಗಿ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆಗೆ ಕೇಂದ್ರದ ನಿರ್ಬಂಧ
ಕೋವಿಡ್-19 ರೋಗಿಗಳಿಗಾಗಿ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆಗೆ ಕೇಂದ್ರದ ನಿರ್ಬಂಧ

ನವದೆಹಲಿ: ಕೋವಿಡ್-19 ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ಕೇಂದ್ರ ಸರ್ಕಾರ ಕೈಗಾರಿಕೆಗಳಿಗೆ ಆಮ್ಲ ಜನಕ ಪೂರೈಕೆ ಮಾಡುವುದನ್ನು ನಿರ್ಬಂಧಿಸಿದೆ. 

ಕೊರೋನಾ 2ನೇ ಅಲೆ ದೇಶವನ್ನು ತೀವ್ರವಾಗಿ ಬಾಧಿಸುತ್ತಿದ್ದು, ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರೋಗಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ಜನಕದ ಅಗತ್ಯವಿದೆ.  ಈ ಹಿನ್ನೆಲೆಯಲ್ಲಿ ನಿರ್ದಿಷ್ಟ 9 ಕೈಗಾರಿಕೆಗಳನ್ನು ಹೊರತುಪಡಿಸಿ ಬೇರೆಲ್ಲಾ ಕೈಗಾರಿಕೆಗಳಿಗೂ ಕೇಂದ್ರ ಸರ್ಕಾರ ಆಮ್ಲಜನಕ ಪೂರೈಕೆಯನ್ನು ಸ್ಥಗಿತಗೊಳಿಸಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ನೇತೃತ್ವದ ಎಂಪರ್ವರ್ಡ್ ಗ್ರೂಪ್-II, ಈ ಆದೇಶ ಹೊರಡಿಸಿದ್ದು, ಗುರುವಾರದಿಂದ ಈ ನಿಯಮ ಜಾರಿಗೊಳ್ಳಲಿದೆ. ಇದೇ ವೇಳೆ ರೈಲ್ವೆ ಪರ್ಯಾಯವಾಗಿ ಆಕ್ಸಿಜನ್ ಎಕ್ಸ್ ಪ್ರೆಸ್ ನ್ನು ಪ್ರಾರಂಭಿಸಲಿದೆ. ಈ ನಡುವೆ ದೆಹಲಿಯಲ್ಲಿ ಆರೋಗ್ಯ ಬಿಕ್ಕಟ್ಟು ಉಂಟಾಗಿದ್ದು 100 ಐಸಿಯು ಬೆಡ್ ಗಳಷ್ಟೇ ಲಭ್ಯವಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com