ಕೊರೋನಾ ಪರಿಸ್ಥಿತಿ ನಿರ್ವಹಣೆ: ಪ್ರಧಾನಿಗೆ ಪತ್ರ ಬರೆದ ಮನ್ ಮೋಹನ್ ಸಿಂಗ್ ವಿರುದ್ಧ ಹರ್ಷವರ್ಧನ್ ವಾಗ್ದಾಳಿ

ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ವಿರುದ್ಧ ಕೇಂದ್ರ ಸಚಿವ ಹರ್ಷವರ್ಧನ್ ಸೋಮವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು, ಜನರಿಗೆ ಲಸಿಕೆ ಹಾಕಿಸುವ ಬದಲು ಲಸಿಕೆ ಬಗ್ಗೆ ಅನುಮಾನಪಡುವಲ್ಲಿ  ಬ್ಯುಸಿಯಾಗಿವೆ ಎಂದು ಆರೋಪಿಸಿದ್ದಾರೆ.
ಮನ್ ಮೋಹನ್ ಸಿಂಗ್, ಹರ್ಷವರ್ಧನ್
ಮನ್ ಮೋಹನ್ ಸಿಂಗ್, ಹರ್ಷವರ್ಧನ್

ನವದೆಹಲಿ: ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ವಿರುದ್ಧ ಕೇಂದ್ರ ಸಚಿವ ಹರ್ಷವರ್ಧನ್ ಸೋಮವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು, ಜನರಿಗೆ ಲಸಿಕೆ ಹಾಕಿಸುವ ಬದಲು ಲಸಿಕೆ ಬಗ್ಗೆ ಅನುಮಾನಪಡುವಲ್ಲಿ  ಬ್ಯುಸಿಯಾಗಿವೆ ಎಂದು ಆರೋಪಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನ್ ಮೋಹನ್ ಸಿಂಗ್ ಪತ್ರ ಕುರಿತಂತೆ ಪ್ರತಿಕ್ರಿಯಿಸಿದ ಹರ್ಷವರ್ಧನ್, ಹಿರಿಯ ಕಾಂಗ್ರೆಸ್ ಮುಖಂಡರು ಅವರ ನಿಲುವಿಗೆ ದೊಡ್ಡ ಅಪಚಾರ ಮಾಡಿದ್ದಾರೆ ಎಂದಿದ್ದಾರೆ. 

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಲಸಿಕೆ ಮಹತ್ವವನ್ನು ಸಿಂಗ್ ಅರ್ಥ ಮಾಡಿಕೊಂಡಿರುವುದನ್ನು ಒಪ್ಪುತ್ತೇನೆ. ಕೆಲ ಕಾಂಗ್ರೆಸ್ ಆಡಳಿತ ವಿರುವ ರಾಜ್ಯಗಳಲ್ಲಿ ಹಿರಿಯ ನಾಗರಿಕರು, ಮುಂಚೂಣಿ ಕಾರ್ಯಕರ್ತರಿಗೂ ಕೂಡಾ ಲಸಿಕೆ ಹಾಕಿಲ್ಲ ಎಂದು ಹೇಳಿದ್ದಾರೆ.

ಸಿಂಗ್ ಅವರಿಗೆ ಟ್ವೀಟ್ ಮಾಡಿರುವ ಹರ್ಷವರ್ಧನ್,ನಿಮ್ಮ ರಚನಾತ್ಮಕ, ಅಮೂಲ್ಯವಾದ ಸಲಹೆಗಳನ್ನು ಕಾಂಗ್ರೆಸ್ ಮುಖಂಡರು ಪಾಲಿಸಿದರೆ ಇತಿಹಾಸವು ನಿಮಗೆ ದಯೆವುಳ್ಳದಾಗಿರುತ್ತದೆ ಎಂದು ಹೇಳಿದ್ದಾರೆ.

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಡಾ. ಮನ್ ಮೋಹನ್ ಸಿಂಗ್, ವಾಕ್ಸಿನೇಷನ್ ಹೆಚ್ಚಳ ಸೇರಿದಂತೆ ಕೋವಿಡ್-19 ಬಿಕ್ಕಟ್ಟು ಹೋರಾಟದದ ನಾಲ್ಕು ಕ್ರಮಗಳನ್ನು ಸಲಹೆ ನೀಡಿದ್ದರು. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ನಿಮ್ಮ ದೃಷ್ಟಿಕೋನವನ್ನು ಹಂಚಿಕೊಳ್ಳಲುತ್ತಿಲ್ಲ ಎಂದು ಹರ್ಷವರ್ಧನ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com