ದೆಹಲಿಯಲ್ಲಿ ಕೊರೋನಾ ದಾಖಲೆ: ಒಂದೇ ದಿನ 25 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣ ದಾಖಲು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ತನ್ನ ಅಬ್ಬರ ಮುಂದುವರೆಸಿದ್ದು, ಒಂದೇ ದಿನದಲ್ಲಿ ದಾಖಲೆಯ 25 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿದೆ.
Published: 19th April 2021 10:03 AM | Last Updated: 19th April 2021 01:00 PM | A+A A-

ಸಂಗ್ರಹ ಚಿತ್ರ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ತನ್ನ ಅಬ್ಬರ ಮುಂದುವರೆಸಿದ್ದು, ಒಂದೇ ದಿನದಲ್ಲಿ ದಾಖಲೆಯ 25 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿದೆ.
ದೆಹಲಿಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 25,462 ಸೊಂಕು ಪ್ರಕರಣಗಳು ದಾಖಲಾಗಿದ್ದು, ಇದು ಈ ವರೆಗಿನ ಗರಿಷ್ಠ ದೈನಂದಿನ ಪ್ರಕರಣಗಳಾಗಿವೆ. ಆ ಮೂಲಕ ದೆಹಲಿಯಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 8,53,460ಕ್ಕೆ ಏರಿಕೆಯಾಗಿದೆ. ನಿನ್ನೆ ದೆಹಲಿಯಲ್ಲಿ 20,159 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ 7,66,398ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ನಿನ್ನೆ 161 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ನಿಂದ ಸಾವಿಗೀಡಾದವರ ಒಟ್ಟಾರೆ ಸಂಖ್ಯೆ 12,121ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೆಹಲಿಯಲ್ಲಿ 74,941 ಸಕ್ರಿಯ ಪ್ರಕರಣಗಳಿವೆ. ಅಂತೆಯೇ ದೆಹಲಿಯ ಸೋಂಕು ಸಕಾರಾತ್ಮಕ ಪ್ರಮಾಣ ಕೂಡ ಶೇ.29.74ಕ್ಕೆ ಏರಿಕೆಯಾಗಿದೆ.
Delhi reports 25,462 fresh COVID cases (positivity rate - 29.74%), 20,159 recoveries, and 161 deaths in the last 24 hours
— ANI (@ANI) April 18, 2021
Active cases: 74,941
Total recoveries: 7,66,398
Death toll: 12,121 pic.twitter.com/PRbD35Ed33
Delhi Police have registered 569 FIRs, arrested 323 people & issued 2,369 challans for violation of weekend lockdown pic.twitter.com/9MmnIan0xa
— ANI (@ANI) April 18, 2021