ಮೇ 1ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ: ಕೇಂದ್ರ

ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಪಡೆಯಬಹುದು ಭಾರತ ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಲಸಿಕೆ ಅಭಿಯಾನ
ಲಸಿಕೆ ಅಭಿಯಾನ

ನವದೆಹಲಿ: ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಪಡೆಯಬಹುದು ಭಾರತ ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಇನ್ನು ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಡ್ರೈವ್‌ನ 3ನೇ ಹಂತದಲ್ಲಿ ಬೆಲೆ ನಿಗದಿ, ಅರ್ಹತೆ, ಲಸಿಕೆಗಳ ನಿರ್ವಹಣೆಯನ್ನು ಸುಲಭವಾಗಿ ಮಾಡಲಾಗುತ್ತಿದೆ.

18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್ -19 ವಿರುದ್ಧ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ.

ಲಸಿಕೆ ತಯಾರಕರು ತಮ್ಮ ಉತ್ಪಾದನೆಯನ್ನು ಮತ್ತಷ್ಟು ಹೆಚ್ಚಿಸಲು ಪ್ರೋತ್ಸಾಹ.

ಲಸಿಕೆ ತಯಾರಕರು ತಮ್ಮ ಪೂರೈಕೆಯ ಶೇ. 50ರಷ್ಟನ್ನು ರಾಜ್ಯ ಸರ್ಕಾರಗಳಿಗೆ ಮತ್ತು ಮುಕ್ತ ಮಾರುಕಟ್ಟೆಯಲ್ಲಿ ಪೂರ್ವ ಘೋಷಿತ ಬೆಲೆಗೆ ಬಿಡುಗಡೆ ಮಾಡಲು ಅಧಿಕಾರ ನೀಡಲಾಗಿದೆ.

ಹೆಚ್ಚುವರಿ ಲಸಿಕೆ ಪ್ರಮಾಣವನ್ನು ನೇರವಾಗಿ ಉತ್ಪಾದಕರಿಂದ ಸಂಗ್ರಹಿಸಲು ರಾಜ್ಯಗಳಿಗೆ ಅಧಿಕಾರ. ಜೊತೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಯಾವುದೇ ವರ್ಗದ ಜನರು ಲಸಿಕೆ ಪಡೆಯಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com