ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಗೆ ಕೊರೋನಾ ಪಾಸಿಟಿವ್

ತೆಲಂಗಾಣದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಸೋಮವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮೆದಕ್ ಜಿಲ್ಲೆಯ ಎರ್ರಾವಳ್ಳಿಯಲ್ಲಿರುವ ಅವರ ತೋಟದ ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.
ಕೆ.ಸಿ.ಚಂದ್ರಶೇಖರ್
ಕೆ.ಸಿ.ಚಂದ್ರಶೇಖರ್

ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಸೋಮವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮೆದಕ್ ಜಿಲ್ಲೆಯ ಎರ್ರಾವಳ್ಳಿಯಲ್ಲಿರುವ ಅವರ ತೋಟದ ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.

ಮುಖ್ಯಮಂತ್ರಿಗಳು ಸೌಮ್ಯ ಲಕ್ಷಣಗಳನ್ನು ಹೊಂದಿದ್ದ ಅವರೀಗ ಐಸೋಲೇಶನ್‌ನಲ್ಲಿದ್ದಾರೆ. ಸದ್ಯ ಅವರ ತೋಟದ ಮನೆಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ ಎಂದು ತೆಲಂಗಾಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಅವರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಸಿಆರ್ ಅವರು ಕಳೆದ ಏಪ್ರಿಲ್ 14 ರಂದು ನಲ್ಗೊಂಡ ಜಿಲ್ಲೆಯ ಹಲಿಯಾದಲ್ಲಿ ಟಿಆರ್ ಎಸ್ ಅಭ್ಯರ್ಥಿ ನೋಮುಲಾ ಭಗತ್ ಅವರ ಪರವಾಗಿ ಉಪ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ್ದರು.

ನೋಮುಲಾ ಭಗತ್ ಮತ್ತು ಅವರ ಇಡೀ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com