ಕೋವಿಡ್-19 ಪ್ರಕರಣಗಳ ಹೆಚ್ಚಳ: ಉತ್ತರ ಪ್ರದೇಶದ ಐದು ನಗರಗಳಲ್ಲಿ ಲಾಕ್ ಡೌನ್ 

ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಐದು ನಗರಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಖನೌ: ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಐದು ನಗರಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ.

ಲಖನೌ, ಪ್ರಯಾಗ್ ರಾಜ್, ಕಾನ್ಫುರ ಮತ್ತು ಗೋರಖ್ ಪುರದಲ್ಲಿ ಇಂದು ರಾತ್ರಿಯಿಂದ ಏಪ್ರಿಲ್ 26ರವರೆಗೂ ಲಾಕ್ ಡೌನ್ ಹೇರಲಾಗಿದೆ. ಆದಾಗ್ಯೂ, ದಿನಸಿ ಅಂಗಡಿಗಳು, ಔಷಧದಂತಹ ಅವಶ್ಯಕ ಸೇವೆಗಳಿಗೆ ಈ ನಿರ್ಬಂಧಗಳಿಂದ ವಿನಾಯಿತಿ ನೀಡಲಾಗಿದೆ.

ಕೋವಿಡ್-19 ಔಷಧ, ಆಸ್ಪತ್ರೆಗಳಲ್ಲಿ ಸೂಕ್ತ ರೀತಿಯಲ್ಲಿ ಆಕ್ಸಿಜನ್ ಸೌಲಭ್ಯವನ್ನು ಒದಗಿಸಬೇಕೆಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಮುಖ್ಯಮಂತ್ರಿ ಕಚೇರಿಗೆ ಅಲಹಾಬಾದ್ ಹೈಕೋರ್ಟ್ ಸೂಚಿಸಿದೆ. 

 ವಾಣಿಜ್ಯ ಸಂಸ್ಥೆಗಳು, ವೈದ್ಯಕೀಯ ಮತ್ತು ಆರೋಗ್ಯ ಸೇವೆ, ಕೈಗಾರಿಕೆಗಳು, ಸಾರ್ವಜನಿಕ ಸಾರಿಗೆ, ಮುನ್ಸಿಪಲ್ ಕಾರ್ಯನಿರ್ವಹಣೆ ಮತ್ತಿತರ ಅವಶ್ಯಕ ಸೇವೆಗಳಿಗೆ ಈ ನಗರಗಳಲ್ಲಿ ವಿನಾಯಿತಿ ನೀಡುವಂತೆಯೂ ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದ್ದು, ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ಬಂದ್ ಮಾಡಲು ತಿಳಿಸಿದೆ. 

ಧಾರ್ಮಿಕ, ವಿವಾಹ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಆದಾಗ್ಯೂ, ಈಗಾಗ್ಗಲೆೇ ಮದುವೆ ದಿನಾಂಕವನ್ನು ನಿಗದಿಗೊಳಿಸಿದ್ದರೆ ಸಂಬಂಧಿತ ಜಿಲ್ಲಾಧಿಕಾರಿಗಳಿಗೆ ಅನುಮತಿಯನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೇ 25 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com