ಬಂಗಾಳ ಚುನಾವಣೆ: ಕೋವಿಡ್ 2ನೇ ಅಲೆಗೆ ಪಿಎಂ ಮೋದಿ ಕಾರಣ; ಮಮತಾ ಬ್ಯಾನರ್ಜಿ ಆರೋಪ

ದೇಶದಲ್ಲಿ ಕೊರೋನಾ 2ನೇ ಅಲೆ ತಾಂಡವವಾಡುತ್ತಿದ್ದು ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ನರೇಂದ್ರ ಮೋದಿ-ಮಮತಾ ಬ್ಯಾನರ್ಜಿ
ನರೇಂದ್ರ ಮೋದಿ-ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ದೇಶದಲ್ಲಿ ಕೊರೋನಾ 2ನೇ ಅಲೆ ತಾಂಡವವಾಡುತ್ತಿದ್ದು ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. 

ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆಯಲ್ಲಿ ಕಾಲಿಗಂಜ್ ನಲ್ಲಿ ಚುನಾವಣಾ ಪ್ರಚಾರ ನಡೆಸಿದ ಮಮತಾ ಬ್ಯಾನರ್ಜಿ ಅವರು ಕಳೆದ ಆರು ತಿಂಗಳಿನಿಂದ ದೇಶದಲ್ಲಿ ಕೊರೋನಾ ಹೆಚ್ಚಾಗುವುದನ್ನು ತಡೆಗಟ್ಟಲು ಪ್ರಧಾನಿ ಮೋದಿ ಅವರು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ. ನಿರ್ದಿಷ್ಟ ಸಮಯದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದ್ದರೆ ಕೊರೋನಾ 2ನೇ ಅಲೆಯನ್ನು ತಡೆಯಬಹುದಿತ್ತೇನೋ? ಇದಕ್ಕೆ ಪ್ರಧಾನಿ ಮೋದಿ ಉತ್ತರಿಸಬೇಕು ಎಂದು ಹೇಳಿದ್ದಾರೆ. 

ಇದೇ ವೇಳೆ ಮಾತನಾಡಿದ ಮಮತಾ ಬ್ಯಾನರ್ಜಿ, ಕೋವಿಡ್-19 ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಈ ಹಿಂದೆ ಘೋಷಿಸಿದ್ದಂತೆ ಮೂರು ಹಂತದ ಬದಲಿಗೆ ಒಂದು ಅಥವಾ ಎರಡು ದಿನಗಳಲ್ಲಿ  ಚುನಾವಣೆಯನ್ನು ಮುಗಿಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದರು. 

ಕೈ ಮುಗಿದು ಚುನಾವಣಾ ಆಯೋಗದ ಬಳಿ ಮನವಿ ಮಾಡುತ್ತೇನೆ. ಮುಂದಿನ ಮೂರು ಹಂತದ ಚುನಾವಣೆಯನ್ನು ಒಂದೇ ಹಂತದಲ್ಲಿ ಮುಗಿಸಿ, ಇಲ್ಲವೇ ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಿ, ಒಂದು ದಿನ ಉಳಿಸಿ, ಬಿಜೆಪಿ ಏನು ಹೇಳುತ್ತದೆಯೋ ಅದರ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಬೇಡಿ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಚುನಾವಣಾ ದಿನಾಂಕವನ್ನು ಮೊಟುಕಗೊಳಿಸಿ, ಸಾಧ್ಯವಾದಲ್ಲಿ ಒಂದೇ ದಿನ ಮುಗಿಸಿ ಎಂದು ಮಮತಾ ಬ್ಯಾನರ್ಜಿ ಹೇಳಿದರು.

ತಾನು ಹಾಗೂ ಟಿಎಂಸಿಯ ಇತರ ಮುಖಂಡರು ಯಾವುದೇ ಚುನಾವಣಾ ರ‍್ಯಾಲಿಯನ್ನು ಮಾಡುವುದಿಲ್ಲ ಎಂದು  ಹೇಳಿದ ಮಮತಾ, ಲಸಿಕೆ ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ನರೇಂದ್ರ ಮೋದಿ ಸರ್ಕಾರ ಕಳೆದ ಆರು ತಿಂಗಳಲ್ಲಿ ಯಾವುದೇ ಸೂಕ್ತ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದರು. ಬಿಜೆಪಿಯವರು ದಂಗೆಕೋರರು, ಬಂಗಾಳವನ್ನು ಗುಜರಾತ್ ಆಗಲು ಅವರಿಗೆ ಅವಕಾಶ ಮಾಡಿಕೊಡಬೇಡಿ ಎಂದು ಜನರಲ್ಲಿ ಅವರು ಮನವಿ ಮಾಡಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com