ರಾಹುಲ್ ಗಾಂಧಿ ಕೋವಿಡ್ ನಿಂದ ಶೀಘ್ರ ಚೇತರಿಕೆಗೆ ಮೋದಿ ಹಾರೈಕೆ!

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೋವಿಡ್ ನಿಂದ ಶೀಘ್ರ ಚೇತರಿಸಿಕೊಳ್ಳುವಂತೆ ಪ್ರಧಾನಿ ಮೋದಿ ಮಂಗಳವಾರ ಹಾರೈಸಿದ್ದಾರೆ.
ಪ್ರಧಾನಿ ಮೋದಿ, ರಾಹುಲ್ ಗಾಂಧಿ
ಪ್ರಧಾನಿ ಮೋದಿ, ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೋವಿಡ್ ನಿಂದ ಶೀಘ್ರ ಚೇತರಿಸಿಕೊಳ್ಳುವಂತೆ ಪ್ರಧಾನಿ ಮೋದಿ ಮಂಗಳವಾರ ಹಾರೈಸಿದ್ದಾರೆ.

 ಲೋಕಸಭಾ ಸಂಸದ ರಾಹುಲ್ ಗಾಂಧಿ, ಕೋವಿಡ್-19 ನಿಂದ ಶೀಘ್ರ ಚೇತರಿಸಿಕೊಂಡು, ಉತ್ತಮ ಆರೋಗ್ಯ ಹೊಂದಲಿ ಎಂದು ಹಾರೈಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನ, ಅಲ್ಪ ರೋಗ ಲಕ್ಷಣಗಳೊಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿರುವುದಾಗಿ ರಾಹುಲ್  ಗಾಂಧಿ ಟ್ವೀಟ್ ಮಾಡಿದ್ದರು. 

ಕಾಂಗ್ರೆಸ್ ಪಕ್ಷದ ಮತ್ತೋರ್ವ ಹಿರಿಯ ಮುಖಂಡ ಆನಂದ್ ಶರ್ಮಾ ಗೂ ಕೋವಿಡ್ -19 ದೃಢಪಟ್ಟಿದ್ದು, ಅವರ ಕೂಡಾ ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com