ಆಮ್ಲಜನಕ ಪೂರೈಕೆಯಲ್ಲಿ ತೊಂದರೆ: ಸರ್ಕಾರಿ ಆಸ್ಪತ್ರೆಯಲ್ಲಿ 7 ಕೋವಿಡ್ ರೋಗಿಗಳ ಸಾವು

ವೆಲ್ಲೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ(ಜಿವಿಎಂಸಿಎಚ್) ಕೋವಿಡ್ ವಾರ್ಡ್ ಮತ್ತು ಇತರ ನಿರ್ಣಾಯಕ ಆರೈಕೆ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಏಳು ರೋಗಿಗಳು ಸೋಮವಾರ ನಿಗೂಢ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ. 

Published: 20th April 2021 01:27 AM  |   Last Updated: 20th April 2021 12:56 PM   |  A+A-


oxygen supply

ಸಂಗ್ರಹ ಚಿತ್ರ

Posted By : Vishwanath S
Source : The New Indian Express

ವೆಲ್ಲೂರು: ವೆಲ್ಲೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ(ಜಿವಿಎಂಸಿಎಚ್) ಕೋವಿಡ್ ವಾರ್ಡ್ ಮತ್ತು ಇತರ ನಿರ್ಣಾಯಕ ಆರೈಕೆ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಏಳು ರೋಗಿಗಳು ಸೋಮವಾರ ನಿಗೂಢ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ. 

ಮೃತ ಕುಟುಂಬಸ್ಥರು ಆಮ್ಲಜನಕದ ಪೂರೈಕೆಯಲ್ಲಿ ಲೋಪವಾಗಿದ್ದರಿಂದ ಸಾವು ಸಂಭವಿಸಿದೆ ಆರೋಪಿಸಿದ್ದಾರೆ. ನಾಲ್ವರು ರೋಗಿಗಳು ಕೋವಿಡ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇತರ ಮೂವರನ್ನು ಇತರ ಐಸಿಯೂ ವಾರ್ಡ್‌ಗಳಲ್ಲಿ ದಾಖಲಿಸಲಾಗಿತ್ತು.

ಮೃತ ಕುಟುಂಬಸ್ಥರು ಸಾವಿಗೆ ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂದು ದೂಷಿಸಿದ್ದರಿಂದ ಉದ್ವಿಗ್ನತೆಗೆ ಕಾರಣವಾಗಿದೆ. ಸರಿಯಾದ ಪ್ರಮಾಣದ ಆಮ್ಲಜನಕದ ಪೂರೈಕೆಯನ್ನು ಖಾತ್ರಿಪಡಿಸಿಕೊಳ್ಳದೆ ಆಸ್ಪತ್ರೆಯ ಅಧಿಕಾರಿಗಳು ರೋಗಿಗಳ ಜೀವದ ಜೊತೆ ಆಟವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಯಾವುದೇ ಆಮ್ಲಜನಕದ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ವೈದ್ಯರು ಹೇಳಿದ್ದು ತಂತ್ರಜ್ಞರು ಸಮಸ್ಯೆ ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದ್ದರೂ ಎಂದು ರೋಗಿಯ ಸಂಬಂಧಿಕರೊಬ್ಬರು ಹೇಳಿದರು.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp