ಅಸ್ಸಾಂನಲ್ಲಿ 18 ರಿಂದ 45 ವರ್ಷದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ: ಸಚಿವ ಹಿಮಂತ ಶರ್ಮಾ

ಅಸ್ಸಾಂ ಸರ್ಕಾರ ಮೇ 1 ರಿಂದ 18 ರಿಂದ 45 ವರ್ಷದ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಿದೆ ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಹೇಳಿದ್ದಾರೆ.
ಹಿಮಂತ ಬಿಸ್ವಾ ಶರ್ಮಾ
ಹಿಮಂತ ಬಿಸ್ವಾ ಶರ್ಮಾ

ಗುವಾಹಟಿ: ಅಸ್ಸಾಂ ಸರ್ಕಾರ ಮೇ 1 ರಿಂದ 18 ರಿಂದ 45 ವರ್ಷದ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಿದೆ ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಹೇಳಿದ್ದಾರೆ.

ಕೋವಿಡ್ ನಿರ್ವಹಣೆಗಾಗಿ ಕಳೆದ ವರ್ಷ ಪಡೆದ ದೇಣಿಗೆಗಳನ್ನು ಕೋವಿಡ್ ಲಸಿಕೆ ಖರೀದಿಗಾಗಿ ಬಳಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. 

ರಾಜ್ಯ ಆರೋಗ್ಯ ಇಲಾಖೆ 1 ಕೋಟಿ ಡೋಸ್ ಲಸಿಕೆ ಖರೀದಿಸಲು ಈಗಾಗಲೇ ಕೋವಾಕ್ಸಿನ್ ತಯಾರಕ ಭಾರತ್ ಬಯೋಟೆಕ್‌ಗೆ ಪತ್ರ ಬರೆದಿದೆ ಎಂದು ಶರ್ಮಾ ಹೇಳಿದ್ದಾರೆ.

"ಅಸ್ಸಾಂ ಸರ್ಕಾರ 18 ರಿಂದ 45 ವರ್ಷದ ಎಲ್ಲರಿಗೂ ಉಚಿತ ಲಸಿಕೆಗಳನ್ನು ನೀಡಲಿದೆ. 45 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡುತ್ತಿದೆ" ಎಂದು ಶರ್ಮಾ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com