ಕೋವಿಡ್ -19: ಕೇರಳ ಸರ್ಕಾರಿ ಕಚೇರಿಗಳಲ್ಲಿ ಶೇ. 50 ರಷ್ಟು ಸಿಬ್ಬಂದಿ ಕೆಲಸ, ಶನಿವಾರ ರಜೆ ಘೋಷಣೆ

ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಶೇ. 50 ರಷ್ಟು ನೌಕರರು ಮಾತ್ರ ಕಾರ್ಯನಿರ್ವಹಿಸಬೇಕು. ಉಳಿದ ಶೇ. 50 ರಷ್ಟು ಸಿಬ್ಬಂದಿ ಆನ್‌ಲೈನ್...
ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್
ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್

ತಿರುವನಂತಪುರಂ: ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಶೇ. 50 ರಷ್ಟು ನೌಕರರು ಮಾತ್ರ ಕಾರ್ಯನಿರ್ವಹಿಸಬೇಕು. ಉಳಿದ ಶೇ. 50 ರಷ್ಟು ಸಿಬ್ಬಂದಿ ಆನ್‌ಲೈನ್ ಮೋಡ್‌ನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದೆ.

ವಾರಾಂತ್ಯದಲ್ಲಿ ಶನಿವಾರ ಮತ್ತು ಭಾನುವಾರ ಹೆಚ್ಚಿನ ನಿರ್ಬಂಧಗಳನ್ನು ಹೇರಲಾಗಿದ್ದು, ಪ್ರತಿ ಶನಿವಾರ ಸರ್ಕಾರಿ ನೌಕರರಿಗೆ ರಜೆ ಘೋಷಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ನಿಗ್ರಹಿಸಲು ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಹೆಚ್ಚಿನ ವಲಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿರಬೇಕು. ಆನ್‌ಲೈನ್ ಶಿಕ್ಷಣಕ್ಕೆ ಮಾತ್ರ ಅನುಮತಿ ನೀಡಲಾಗಿದೆ ಮತ್ತು ಖಾಸಗಿ ವಲಯದ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com