ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಗೆ ಕೊರೋನಾ ಪಾಸಿಟಿವ್

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಅವರಿಗೆ ಬುಧವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ರಮೇಶ್ ಪೋಖ್ರಿಯಾಲ್
ರಮೇಶ್ ಪೋಖ್ರಿಯಾಲ್

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಅವರಿಗೆ ಬುಧವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಕೋವಿಡ್-19 ಪರೀಕ್ಷಾ ವರದಿ ಪಾಸಿಟಿವ್ ಬಂದ ನಂತರ ವೈದ್ಯಕೀಯ ಸಲಹೆಯನ್ನು ಅನುಸರಿಸುತ್ತಿರುವುದಾಗಿ 61 ವರ್ಷದ ಕೇಂದ್ರ ಶಿಕ್ಷಣ ಸಚಿವರು ಹೇಳಿದ್ದಾರೆ.

ನನಗೆ ಇಂದು ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ನನ್ನ ವೈದ್ಯರ ಸಲಹೆಯಂತೆ ನಾನು ಔಷಧಿ ಮತ್ತು ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಪೋಖ್ರಿಯಾಲ್ ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com