ಪಾಕ್ ನಿಂದ ಹಾರಿಬಂದ ಪಾರಿವಾಳದ ವಿರುದ್ಧ ಎಫ್ ಐಆರ್ ದಾಖಲಿಸಲು ಬಿಎಸ್ಎಫ್ ಒತ್ತಾಯ!

ಪಾಕಿಸ್ತಾನದಿಂದ ವಿಚಿತ್ರ ಆಗಂತುಕನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಗಡಿ ಭದ್ರತಾ ಪಡೆ ಬಿಎಸ್ ಎಫ್ ಒತ್ತಾಯ ಮಾಡುತ್ತಿದೆ.

Published: 21st April 2021 04:52 PM  |   Last Updated: 21st April 2021 05:13 PM   |  A+A-


Pakistani pigeon

ಸಂಗ್ರಹ ಚಿತ್ರ

Posted By : Srinivasamurthy VN
Source : PTI

ಅಮೃತಸರ: ಪಾಕಿಸ್ತಾನದಿಂದ ವಿಚಿತ್ರ ಆಗಂತುಕನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಗಡಿ ಭದ್ರತಾ ಪಡೆ ಬಿಎಸ್ ಎಫ್ ಒತ್ತಾಯ ಮಾಡುತ್ತಿದೆ.

ಹೌದು.. ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ಒಳನುಸುಳವವರನ್ನು ಹಿಡಿದು ಪ್ರಕರಣ ದಾಖಲಿಸುವುದು ಬಿಎಸ್ ಎಫ್ ಕೆಲಸ... ಆದರೆ ಈ ಬಾರಿ ಗಡಿ ಭದ್ರತಾ ಪಡೆ ವಿಚಿತ್ರ ಆಗಂತುಕನನ್ನು ಬಂಧಿಸಿದ್ದು, ಆ ಆಗಂತುಕ ಬೇರಾರು ಅಲ್ಲ.. ಪಾರಿವಾಳ... ಪಾಕಿಸ್ತಾನದಿಂದ ಭಾರತದೊಳಗೆ ಹಾರಿ ಬಂದಿರುವ  ಪಾರಿವಾಳದ ವಿರುದ್ಧ ಗೂಢಚಾರಿಕೆ ನಡೆಸಿದ ಆರೋಪದ ಮೇರೆಗೆ ಎಫ್ ಐಆರ್ ದಾಖಲಿಸುವಂತೆ ಬಿಎಸ್ ಎಫ್ ಅಧಿಕಾರಿಗಳು ಒತ್ತಾಯಿಸಿದ್ದಾರೆ. ಅಲ್ಲದೆ ಈ ಬಗ್ಗೆ ಪಂಜಾಬ್ ಪೊಲೀಸ್ ಇಲಾಖೆಯ ಅಭಿಪ್ರಾಯ ಕೋರಿದ್ದಾರೆ.

ಕಳೆದ ಶನಿವಾರ ಇಲ್ಲಿನ ರೊರಾವಾಲಾ ಪೋಸ್ಟ್‌ನಲ್ಲಿರುವ ಗಡಿ ಭದ್ರತಾ ಪಡೆಯ ಜವಾನನ ಭುಜದ ಮೇಲೆ ಶಂಕಿತ ಪಾರಿವಾಳವೊಂದು ತಾನೇ ತಾನಾಗಿ ಬಂದು ಕೂತಿದೆ.  ಈ ಪಾರಿವಾಳದ ಕಾಲಿನಲ್ಲಿ ಸಣ್ಣ ಪೇಪರ್ ತುಂಡನ್ನು ಕಟ್ಟಲಾಗಿತ್ತು. ಈ ಪೇಪರ್ ನಲ್ಲಿ ಕೆಲ ಸಂಪರ್ಕ ಸಂಖ್ಯೆಗಳನ್ನು ನಮೂದಿಸಲಾಗಿತ್ತು.  ಈ ಪಾರಿವಾಳ ಗಡಿಯುದ್ದಕ್ಕೂ ಹಾರಾಟ ನಡೆಸಿತ್ತು. ಹೀಗಾಗಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಎಸ್ಎಫ್ ಸಿಬ್ಬಂದಿ ಲಿಖಿತ ಬೇಡಿಕೆಯೊಂದಿಗೆ ಪಕ್ಷಿಯನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಬಿಎಸ್ಎಫ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಧ್ರುವ್ ದಹಿಯಾ ಅವರು ಮಾತನಾಡಿ, ಬಿಎಸ್ಎಫ್ ಪಾರಿವಾಳದ ವಿರುದ್ಧ ಎಫ್ಐಆರ್ ನೋಂದಾಯಿಸಲು ಒತ್ತಾಯಿಸಲಾಗಿದೆ. ಪಾರಿವಾಳವು ಪಕ್ಷಿಯಾಗಿರುವುದರಿಂದ, ಅದರ ವಿರುದ್ಧ ಎಫ್‌ಐಆರ್ ದಾಖಲಿಸಬಹುದು ಎಂದು ನಾನು ಭಾವಿಸುವುದಿಲ್ಲ.  ಆದರೆ ಅವರ ಅಭಿಪ್ರಾಯಕ್ಕಾಗಿ ನಾವು ಈ ವಿಷಯವನ್ನು ನಮ್ಮ ಕಾನೂನು ತಜ್ಞರಿಗೆ ಹಸ್ತಾಂತರಿಸಿದ್ದೇವೆ ಎಂದು ಅವರು ಬುಧವಾರ ಹೇಳಿದರು. ಪಾರಿವಾಳದ ಕಾಲಿಗೆ ಟ್ಯಾಗ್ ಮಾಡಲಾದ ಸಂಖ್ಯೆಯನ್ನು ವಿಶ್ಲೇಷಿಸಲಾಗುತ್ತಿದ್ದು, ಗೂಢಚರ್ಯೆ ಯತ್ನಗಳನ್ನು ಶಂಕಿಸಲಾಗುತ್ತಿದೆ. ಗಡಿ ಪ್ರದೇಶಗಳಲ್ಲಿ ಪಾರಿವಾಳಗಳನ್ನು  "ಸೆರೆಹಿಡಿಯಲಾಗಿದೆ" ಎಂದು ಹೇಳಿದ್ದಾರೆ.  


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp