ನಾಸಿಕ್: ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆ: 20ಕ್ಕೂ ಹೆಚ್ಚು ಕೋವಿಡ್ ರೋಗಿಗಳ ಸಾವು

ನಾಸಿಕ್ ನ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದ, ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ರೋಗಿಗಳು ಸಾವನ್ನಪ್ಪಿದ್ದಾರೆ. 

Published: 21st April 2021 03:08 PM  |   Last Updated: 21st April 2021 03:13 PM   |  A+A-


Oxygen tank leaks at Nashik's Zakir Hussain Hospital, 22 patients feared dead

ನಾಸಿಕ್: ಜಾರಿಕ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆ: 22 ರೋಗಿಗಳ ಸಾವು

Posted By : Srinivas Rao BV
Source : The New Indian Express

ನಾಸಿಕ್: ನಾಸಿಕ್ ನ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದ, ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 20  ಕೋವಿಡ್-19 ರೋಗಿಗಳೂ ಸೇರಿ ಒಟ್ತು 22 ಮಂದಿ ಸಾವನ್ನಪ್ಪಿದ್ದಾರೆ. 

ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಸ್ಟೋರೇಜ್ ಟ್ಯಾಂಕ್ ನಲ್ಲಿದ್ದ ಆಮ್ಲಜನಕ ಬೃಹತ್ ಪ್ರಮಾಣದಲ್ಲಿ ಸೋರಿಕೆಯಾಗಿದೆ, ಈ ಬಗ್ಗೆ ತನಿಖೆಗೆ ಆದೇಶಿಸಲಾಗುವುದು ಎಂದು ಹೇಳಿದ್ದಾರೆ. 

ನಾಸಿಕ್ ಮಹಾನಗರ ಪಾಲಿಕೆಯಿಂದ ಕೋವಿಡ್-19  ನಿರ್ವಹಣೆಯಾಗುತ್ತಿದ್ದ ಆಸ್ಪತ್ರೆ ಇದಾಗಿದೆ.ಇತ್ತೀಚಿನ ಮಾಹಿತಿಯ ಪ್ರಕಾರ ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ಮಂದಿ ಸಾವನ್ನಪ್ಪಿದ್ದಾರೆ. ಈ ಸೋರಿಕೆಯಿಂದ ಆಕ್ಸಿಜನ್ ಪೂರೈಕೆ ಕುಸಿದು ರೋಗಿಗಳು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಒಟ್ಟಾರೆ 150 ರೋಗಿಗಳ ಪೈಕಿ 127 ಮಂದಿಗೆ ಆಕ್ಸಿಜನ್ ನೀಡಲಾಗುತ್ತಿತ್ತು. ಸೋರಿಕೆಯಾಗುತ್ತಿರುವ ಆಕ್ಸಿಜನ್ ನ ವಿಡಿಯೋ ವೈರಲ್ ಆಗತೊಡಗಿದೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp