ರಾಮನವಮಿ: ದೇಶದ ಜನತೆಗೆ ಶುಭಾಶಯ ಕೋರಿ, ಕೊರೋನಾ ಮಾರ್ಗಸೂಚಿ ಪಾಲನೆ ಮಾಡುವಂತೆ ಪ್ರಧಾನಿ ಮೋದಿ ಮನವಿ

ಮರ್ಯಾದಾ ಪುರುಷೋತ್ತಮ ಶ್ರೀ ರಾಮನ ಜನ್ಮದಿನವಾದ ಚೈತ್ರ ಮಾಸದ ಶುಕ್ಲಪಕ್ಷದ ನವಮಿಯನ್ನು ದೇಶದೆಲ್ಲೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯ ಕೋರಿದ್ದಾರೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಮರ್ಯಾದಾ ಪುರುಷೋತ್ತಮ ಶ್ರೀ ರಾಮನ ಜನ್ಮದಿನವಾದ ಚೈತ್ರ ಮಾಸದ ಶುಕ್ಲಪಕ್ಷದ ನವಮಿಯನ್ನು ದೇಶದೆಲ್ಲೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯ ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಇಂದು ರಾಮ ನವಮಿ. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಸಂದೇಶದಂತೆ ಅವರ ನಡವಳಿಕೆಯನ್ನು ಅನುಸರಿಸುವುದಾಗಿದೆ. ಈ ಕೊರೋನಾ ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ಸೋಂಕು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಎಲ್ಲಾ ನಿಯಮಗಳನ್ನು ಪಾಲನೆ ಮಾಡಿದೆ. 'ದವಾಯಿ ಭೀ, ಕಡಾಯಿ ಭಿ' (ಔಷಧಿಯೂ ಇದೆ, ಎಚ್ಚರಿಕೆಯೂ ಇದೆ) ಮಂತ್ರವನ್ನು ಸ್ಮರಿಸಿಕೊಳ್ಳಿ ಎಂದು ಹೇಳಿದ್ದಾರೆ. 

ನಿನ್ನೆಯಷ್ಟೇ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದ ಮೋದಿಯವರು, ದೇಶದಲ್ಲಿ ಮತ್ತೇ ಲಾಕ್‌ಡೌನ್ ಮಾಡುವುದಿಲ್ಲ ಎಂದು ಘೋಷಿಸಿದರು. ಇನ್ನು ಲಾಕ್‌ಡೌನ್ ಕೊನೆಯ ಅಸ್ತ್ರವಾಗಬೇಕು. ಕೊರೋನಾ ನಿಗ್ರಹಕ್ಕೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ ಎಂದು ಹೇಳಿದ್ದರು. ದೇಶದಲ್ಲಿ ನಡೆಯುತ್ತಿರುವ ಯಾವುದೇ ಕೆಲಸ ಹಾಗೂ ಕಾಮಗಾರಿಗಳು ನಿಲ್ಲುವುದಿಲ್ಲ. ಕಾರ್ಮಿಕರು ಯಾವುದೇ ಕಾರಣಕ್ಕೂ ವಲಸೆ ಹೋಗಬೇಡಿ. ಕೊರೋನಾವನ್ನು ನಿಯಂತ್ರಿಸಲು ಕೈಜೋಡಿಸಿ ಎಂದು ಮನವಿ ಮಾಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com