ನಾಸಿಕ್ ಆಸ್ಪತ್ರೆಯ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಮಹಾ ಸಿಎಂ

ನಾಸಿಕ್ ನ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದಾಗಿ ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 20 ಕೋವಿಡ್-19 ರೋಗಿಗಳೂ ಸೇರಿ ಒಟ್ತು 22 ಮಂದಿ ಸಾವನ್ನಪ್ಪಿದ್ದಾರೆ. 
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ನಾಸಿಕ್: ನಾಸಿಕ್ ನ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದಾಗಿ ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 20 ಕೋವಿಡ್-19 ರೋಗಿಗಳೂ ಸೇರಿ ಒಟ್ತು 22 ಮಂದಿ ಸಾವನ್ನಪ್ಪಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ತೀವ್ರ ಸಂತಾಪ ಸೂಚಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಘಟನೆ ಕುರಿತು ತನಿಖೆಗೆ ಆದೇಶಿಸಿದ್ದಾರೆ.

ಈ ಘಟನೆಯಲ್ಲಿ ಸಾವನ್ನಪ್ಪಿದ ಪ್ರತಿಯೊಬ್ಬ ವ್ಯಕ್ತಿಯ ರಕ್ತಸಂಬಂಧಿಗೆ ಐದು ಲಕ್ಷ ರೂ. ಪರಿಹಾರ ನೀಡಲಾಗುವುದು. ಈ ವಿಚಾರದಲ್ಲಿ ಯಾವುದೇ ರೀತಿಯ ರಾಜಕೀಯ ಮಾಡದಂತೆ ನಾನು ಜನರಿಗೆ ಮನವಿ ಮಾಡುತ್ತೇನೆ ಎಂದು ಉದ್ಧವ್ ಠಾಕ್ರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಸಿಕ್ ಮಹಾನಗರ ಪಾಲಿಕೆಯ ಕೋವಿಡ್-19 ನಿಯೋಜಿತ ಆಸ್ಪತ್ರೆ ಇದಾಗಿದ್ದು, ಇತ್ತೀಚಿನ ಮಾಹಿತಿಯ ಪ್ರಕಾರ ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ಮಂದಿ ಸಾವನ್ನಪ್ಪಿದ್ದಾರೆ. ಈ ಸೋರಿಕೆಯಿಂದ ಆಕ್ಸಿಜನ್ ಪೂರೈಕೆ ಕುಸಿದು ರೋಗಿಗಳು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಒಟ್ಟಾರೆ 150 ರೋಗಿಗಳ ಪೈಕಿ 127 ಮಂದಿಗೆ ಆಕ್ಸಿಜನ್ ನೀಡಲಾಗುತ್ತಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com