ಕೋವಿಶೀಲ್ಡ್ ಲಸಿಕೆಯ ದರ ಪ್ರಕಟಿಸಿದ ಸೆರಂ ಇನ್ಸ್ ಟಿಟ್ಯೂಟ್, ಲಸಿಕೆ ದರ ಹೀಗಿದೆ...

ಕೇಂದ್ರ ಸರ್ಕಾರದ ನಿರ್ದೇಶನದ ಪ್ರಕಾರ, ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಒದಗಿಸುತ್ತಿರುವ ಪುಣೆಯ ಸೆರಮ್ ಇನ್ಸ್ ಟಿಟ್ಯೂಟ್ ಕೋವಿಶೀಲ್ಡ್ ಲಸಿಕೆಯ ದರವನ್ನು ಪ್ರಕಟಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೇಂದ್ರ ಸರ್ಕಾರದ ನಿರ್ದೇಶನದ ಪ್ರಕಾರ, ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಒದಗಿಸುತ್ತಿರುವ ಪುಣೆಯ ಸೆರಮ್ ಇನ್ಸ್ ಟಿಟ್ಯೂಟ್ ಕೋವಿಶೀಲ್ಡ್ ಲಸಿಕೆಯ ದರವನ್ನು ಪ್ರಕಟಿಸಿದೆ.

ಸರ್ಕಾರಿ ಆಸ್ಪತ್ರೆಗಳಿಗೆ ಸೆರಂ ಇನ್ಸ್ ಟಿಟ್ಯೂಟ್ ನ ಕೋವಿಶೀಲ್ಡ್ ಲಸಿಕೆಗೆ ಪ್ರತಿ ಡೋಸ್ ಗೆ 400 ರೂಪಾಯಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ 600 ರೂಪಾಯಿ ನಿಗದಿಪಡಿಸಿದೆ.

ಲಸಿಕೆ ತಯಾರಿಕೆಯನ್ನು ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಮಾಡಿರುವ ಘೋಷಣೆಯನ್ನು ನಮ್ಮ ಸಂಸ್ಥೆ ಸ್ವಾಗತಿಸುತ್ತಿದ್ದು ಮುಂದಿನ ಎರಡು ತಿಂಗಳು ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುವುದಾಗಿ ಹೇಳಿದೆ. ನಾವು ಉತ್ಪಾದಿಸುವ ಲಸಿಕೆಯಲ್ಲಿ ಶೇಕಡಾ 50ನ್ನು ಕೇಂದ್ರ ಸರ್ಕಾರದ ಲಸಿಕೆ ಅಭಿಯಾನಕ್ಕೆ ಬಳಸಿಕೊಂಡರೆ, ಉಳಿದ ಶೇಕಡಾ 50ನ್ನು ರಾಜ್ಯ ಸರ್ಕಾರಿ ಆಸ್ಪತ್ರೆಗಳಿಗೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪೂರೈಸಲಾಗುವುದು ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com