ಕೋವಿಡ್-19: ದುಷ್ಕರ್ಮಿಗಳಿಂದ ಆಕ್ಸಿಜನ್ ಸಿಲಿಂಡರ್ ಗಳ ಲೂಟಿ!

ದೇಶಾದ್ಯಂತ ಕೋವಿಡ್ ಸೋಂಕಿತರಿಗೆ ನೀಡಲಾಗುವ ಆಕ್ಸಿಜನ್ ಸಿಲಿಂಡರ್ ಗಳಿಗೆ ಬೇಡಿಕೆ ಹೆಚ್ಚಾದ ಬೆನ್ನಲ್ಲೇ ಇತ್ತ ಮಧ್ಯ ಪ್ರದೇಶದಲ್ಲಿ ಆಸ್ಪತ್ರೆಗೆ ತರಲಾಗಿದ್ದ ಆಕ್ಸಿಜನ್ ಸಿಲಿಂಡರ್ ಗಳನ್ನು ದುಷ್ಕರ್ಮಿಗಳು ಲೂಟಿ ಮಾಡಿದ್ದಾರೆ.
ಆಕ್ಸಿಜನ್ ಸಿಲಿಂಡರ್ ಲೂಟಿ ಮಾಡಿದ ದುಷ್ಕರ್ಮಿಗಳು
ಆಕ್ಸಿಜನ್ ಸಿಲಿಂಡರ್ ಲೂಟಿ ಮಾಡಿದ ದುಷ್ಕರ್ಮಿಗಳು

ಭೋಪಾಲ್: ದೇಶಾದ್ಯಂತ ಕೋವಿಡ್ ಸೋಂಕಿತರಿಗೆ ನೀಡಲಾಗುವ ಆಕ್ಸಿಜನ್ ಸಿಲಿಂಡರ್ ಗಳಿಗೆ ಬೇಡಿಕೆ ಹೆಚ್ಚಾದ ಬೆನ್ನಲ್ಲೇ ಇತ್ತ ಮಧ್ಯ ಪ್ರದೇಶದಲ್ಲಿ ಆಸ್ಪತ್ರೆಗೆ ತರಲಾಗಿದ್ದ ಆಕ್ಸಿಜನ್ ಸಿಲಿಂಡರ್ ಗಳನ್ನು ದುಷ್ಕರ್ಮಿಗಳು ಲೂಟಿ ಮಾಡಿದ್ದಾರೆ.

ಮಧ್ಯಪ್ರದೇಶದ ದಾಮೋ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ತರಲಾಗಿದ್ದ ಆಕ್ಸಿಜನ್ ಸಿಲಿಂಡರ್ ಗಳನ್ನು ದುಷ್ಕರ್ಮಿಗಳು ಲೂಟಿ ಮಾಡಿ ಪರಾರಿಯಾಗಿದ್ದಾರೆ. ವೈದ್ಯಕೀಯ ಆಮ್ಲಜನಕ ಸಿಲಿಂಡರ್‌ಗಳನ್ನು ಹೊಂದಿರುವ ಟ್ರಕ್ ಜಿಲ್ಲಾಸ್ಪತ್ರೆ ತಲುಪುತ್ತಿದ್ದಂತೆಯೇ ವಾಹನದ ಮೇಲೆ ದಾಳಿ  ಮಾಡಿದ ದುಷ್ಕರ್ಮಿಗಳು ಸಿಲಿಂಡರ್ ಗಳನ್ನು ಹೊತ್ತು ಪರಾರಿಯಾಗಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಸ್ಪತ್ರೆ ವರಿಷ್ಠಾಧಿಕಾರಿಗಳು, ಆಕ್ಸಿಜನ್ ಸಿಲಿಂಡರ್ ಗಳ ಲೂಟಿಯಾಗಿರುವುದು ನಿಜ, ಆದರೆ ಇದರಿಂದ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಾಗಿಲ್ಲ. ಆಸ್ಪತ್ರೆಯಲ್ಲಿ ಸಾಕಷ್ಟು ಆಕ್ಸಿಜನ್ ಸಿಲಿಂಡರ್ ಗಳ ದಾಸ್ತಾನಿದೆ. ಹೀಗಾಗಿ ರೋಗಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.  ಅಂತೆಯೇ ಆಕ್ಸಿಜನ್ ಸಿಲಿಂಡರ್ ಗಳ ಲೂಟಿ ಸಂಬಂಧ ಪೊಲೀಸ್ ದೂರು ದಾಖಲಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿರುವ ದೋಮಾ ಜಿಲ್ಲಾಧಿಕಾರಿಗಳು, 'ಆಕ್ಸಿಜನ್ ಟ್ರಕ್ ಬಂದ ಕೂಡಲೇ ದುಷ್ಕರ್ಮಿಗಳು ಸಿಲಿಂಡರ್ ಗಳನ್ನು ಲೂಟಿ ಮಾಡಿದ್ದಾರೆ. ಈ ಬಗ್ಗೆ ಸ್ಥಳೀಯರು ಆರೋಪಿಗಳನ್ನು ಗುರುತಿಸಿದ್ದು, ಈ ಸಂಬಂಧ ಪ್ರಕರಣ ಕೂಡ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com