ಪಶ್ಚಿಮ ಬಂಗಾಳ 6ನೇ ಹಂತದ ಚುನಾವಣೆ: ಈ ವರೆಗೆ ಶೇ.17.19 ರಷ್ಟು ಮತದಾನ, ನಿರ್ಭೀತಿಯಿಂದ ಮತದಾನ ಮಾಡುವಂತೆ ಪ್ರಧಾನಿ ಕರೆ

ಕೊರೋನಾ ಸಾಂಕ್ರಾಮಿಕ ರೋಗದ 2ನೇ ಅಲೆ ಭೀತಿ ನೀಡುವಲ್ಲೇ ಪಶ್ಚಿಮ ಬಂಗಾಳದಲ್ಲಿ 6ನೇ ಹಂತದ ಮತದಾನ ಪ್ರಕ್ರಿಯೆ ಗುರುವಾರ ಆರಂಭವಾಗಿದ್ದು, ಈ ವರೆಗೂಶೇ.17.19ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. 
ಮತದಾನ ಮಾಡಲು ಸಾಲಿನಲ್ಲಿ ನಿಂತಿರುವ ಜನತೆ
ಮತದಾನ ಮಾಡಲು ಸಾಲಿನಲ್ಲಿ ನಿಂತಿರುವ ಜನತೆ

ಕೋಲ್ಕತಾ: ಕೊರೋನಾ ಸಾಂಕ್ರಾಮಿಕ ರೋಗದ 2ನೇ ಅಲೆ ಭೀತಿ ನೀಡುವಲ್ಲೇ ಪಶ್ಚಿಮ ಬಂಗಾಳದಲ್ಲಿ 6ನೇ ಹಂತದ ಮತದಾನ ಪ್ರಕ್ರಿಯೆ ಗುರುವಾರ ಆರಂಭವಾಗಿದ್ದು, ಈ ವರೆಗೂ ಶೇ.17.19ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. 

ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್, ನಡಿಯಾ, ಉತ್ತರ 24 ಪರಗಣ ಜಿಲ್ಲೆಗಳಲ್ಲಿ 43 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. 

ಪಶ್ಚಿಮ ಬಂಗಾಳದಲ್ಲಿ ಇನ್ನೂ ಎರಡು ಹಂತದ ಮತದಾನ ಬಾಕಿ ಉಳಿದಿದೆ. ಏಪ್ರಿಲ್ 26 ರಂದು ಮತ್ತು 29ರಂದು ಏಳು ಮತ್ತು ಎಂಟನೇ ಹಂತದ ಮತದಾನ ನಡೆಯಲಿದೆ.

ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಪಶ್ಚಿಮ ಬಂಗಾಳದ ಜನರು ಹೊಸ ವಿಧಾನಸಭೆಯನ್ನು ಆಯ್ಕೆ ಮಾಡಲು ಮತ ಚಲಾಯಿಸುತ್ತಿದ್ದಾರೆ. ಇಂದು ಆರನೇ ಹಂತದಲ್ಲಿ, ಪ್ರತೀಯೊಬ್ಬರು ತಮ್ಮ ಮತ ಹಕ್ಕು ಚಲಾಯಿಸುವಂತೆ ಕೇಳಿಕೊಳ್ಳುತ್ತೇನೆಂದು ಹೇಳಿದ್ದಾರೆ. 

ಗೃಹ ಸಚಿವ ಅಮಿತ್ ಶಾ ಅವರು ಬಂಗಾಳಿ ಭಾಷೆಯಲ್ಲಿಯೇ ಟ್ವೀಟ್ ಮಾಡಿ, ನಿರ್ಭೀತಿಯಿಂದ ಮತಹಕ್ಕು ಚಲಾಯಿಸುವಂತೆ ಮನವಿ ಮಾಡಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com