ನಿರಂತರ ಆಕ್ಸಿಜನ್ ಉತ್ಪಾದನೆ, ಪೂರೈಕೆ ವ್ಯವಸ್ಥೆಗಾಗಿ ವಿಪತ್ತು ನಿರ್ವಹಣಾ ಕಾಯ್ದೆ ಜಾರಿ: ಎಂಎಚ್ಎ

ನಿರಂತರ ಮೆಡಿಕಲ್ ಅಕ್ಸಿಜನ್ ಉತ್ಪಾದನೆ, ಪೂರೈಕೆ ಹಾಗೂ ಅಂತರ್ ರಾಜ್ಯ ಗಡಿಗಳಲ್ಲಿ ಸಾಗಟಕ್ಕೆ ತೊಂದರೆಯಾಗದ ರೀತಿಯಲ್ಲಿ ಖಾತ್ರಿಗೊಳಿಸುವಂತೆ ರಾಜ್ಯಗಳಿಗೆ ಗುರುವಾರ ಆದೇಶಿಸಿರುವ ಕೇಂದ್ರ ಸರ್ಕಾರ, ತನ್ನ ಆದೇಶದಲ್ಲಿ ಯಾವುದೇ ರೀತಿಯ ಉಲ್ಲಂಘನೆಯಾದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಹೇಳಿದೆ.
ಆಕ್ಸಿಜನ್ ಸಿಲಿಂಡರ್ ಸಾಗಿಸುತ್ತಿರುವ ಕಾರ್ಮಿಕರು
ಆಕ್ಸಿಜನ್ ಸಿಲಿಂಡರ್ ಸಾಗಿಸುತ್ತಿರುವ ಕಾರ್ಮಿಕರು

ನವದೆಹಲಿ: ನಿರಂತರ ಮೆಡಿಕಲ್ ಅಕ್ಸಿಜನ್ ಉತ್ಪಾದನೆ, ಪೂರೈಕೆ ಹಾಗೂ ಅಂತರ್ ರಾಜ್ಯ  ಗಡಿಗಳಲ್ಲಿ ಸಾಗಟಕ್ಕೆ  ತೊಂದರೆಯಾಗದ ರೀತಿಯಲ್ಲಿ ಖಾತ್ರಿಗೊಳಿಸುವಂತೆ ರಾಜ್ಯಗಳಿಗೆ ಗುರುವಾರ ಆದೇಶಿಸಿರುವ ಕೇಂದ್ರ ಸರ್ಕಾರ, ತನ್ನ ಆದೇಶದಲ್ಲಿ ಯಾವುದೇ ರೀತಿಯ ಉಲ್ಲಂಘನೆಯಾದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಹೇಳಿದೆ.

ಕೊರೋನಾವೈರಸ್ ಪ್ರಕರಣಗಳ ದಿಢೀರ್ ಏರಿಕೆ ನಡುವೆ ಕೆಲವೊಂದು ರಾಜ್ಯಗಳು ಇತರ ರಾಜ್ಯಗಳಿಗೆ ಮೆಡಿಕಲ್ ಆಕ್ಸಿಜನ್ ನ್ನು ಪೂರೈಕೆಯನ್ನು ನಿರ್ಬಂಧಿಸಿವೆ  ಎಂಬ ವರದಿಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಕಠಿಣ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಈ ನಿರ್ದೇಶನ ಹೊರಡಿಸಿದ್ದಾರೆ.

ಸೂಕ್ತ ರೀತಿಯಲ್ಲಿ ಮೆಡಿಕಲ್ ಆಕ್ಸಿಜನ್ ಲಭ್ಯತೆ ಹಾಗೂ ತಡೆ ಇಲ್ಲದಂತೆ ಪೂರೈಸುವುದು ಕೋವಿಡ್-19 ನಿರ್ವಹಣೆಯಲ್ಲಿ ಪ್ರಮುಖವಾಗಿದೆ. ಕೋವಿಡ್-19 ಪ್ರಕರಣಗಳ ಹೆಚ್ಚಳದೊಂದಿಗೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯಕ್ಕೆ ತಕ್ಕಂತೆ  ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಬೇಕಾಗಿದೆ ಎಂದು ಭಲ್ಲಾ ಹೇಳಿದ್ದಾರೆ.

ಕೋವಿಡ್-19 ರೋಗಿಗಳ ನಿರ್ವಹಣೆಗಾಗಿ ದೇಶಾದ್ಯಂತ ಅಡ್ಡಿಯಾಗದಂತೆ  ಮೆಡಿಕಲ್ ಆಕ್ಸಿಜನ್ ಪೂರೈಕೆಯನ್ನು 
ಪೂರೈಸಬೇಕಾಗಿದೆ. ಇದಕ್ಕಾಗಿ ವಿಪತ್ತು ನಿರ್ವಹಣಾ ಕಾಯ್ದೆ ಜಾರಿ ಮಾಡಲಾಗಿದ್ದು, ತಮ್ಮ ಪ್ರದೇಶ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಮುಖ್ಯಮಂತ್ರಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿರುವುದಾಗಿ ಗೃಹ ಕಾರ್ಯದರ್ಶಿ ತಿಳಿಸಿದ್ದಾರೆ. 

ರಾಜ್ಯಗಳ ನಡುವೆ ಮೆಡಿಕಲ್ ಆಕ್ಸಿಜನ್ ಪೂರೈಕೆಯನ್ನು ನಿರ್ಬಂಧಿಸದಂತೆ ಆದೇಶದಲ್ಲಿ ಹೇಳಲಾಗಿದೆ. ಅಂತರ - ರಾಜ್ಯಗಳ ನಡುವೆ ಆಕ್ಸಿಜನ್ ಸಾಗಿಸುವ ವಾಹನಗಳಿಗೆ ಉಚಿತವಾಗಿ ಅವಕಾಶ ಕಲ್ಪಿಸುವಂತೆ ಸಾರಿಗೆ ಇಲಾಖೆಗೆ ಸೂಚಿಸಲಾಗಿದೆ. ಯಾವುದೇ ಸಮಯದ ನಿರ್ಬಂಧವಿಲ್ಲದೆ, ನಗರಗಳಿಗೆ ಆಕ್ಸಿಜನ್ ಪೂರೈಸುವ ವಾಹನಗಳು ಮುಕ್ತವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಆದೇಶ ಉಲ್ಲಂಘನೆಯಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಡಿಸಿಪಿಗಳನ್ನು ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com