ಗೌಪ್ಯತೆ ನೀತಿಯನ್ನು ತನಿಖೆ ಮಾಡುವ ಸಿಸಿಐ ಆದೇಶ ವಿರುದ್ಧ ಫೇಸ್‌ಬುಕ್, ವಾಟ್ಸಾಪ್ ಮನವಿ ದೆಹಲಿ ಹೈಕೋರ್ಟ್ ನಲ್ಲಿ ವಜಾ

ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯ ಬಗ್ಗೆ ತನಿಖೆ ನಡೆಸುವಂತೆ ಭಾರತದ ಸ್ಪರ್ಧಾ ಆಯೋಗ ಸಿಸಿಐ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಜಾಲತಾಣ ವೇದಿಕೆಗಳಾದ ಫೇಸ್‌ಬುಕ್ ಮತ್ತು ವಾಟ್ಸಾಪ್ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ದೆಹಲಿ ಹೈಕೋರ್ಟ್
ದೆಹಲಿ ಹೈಕೋರ್ಟ್

ನವದೆಹಲಿ: ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯ ಬಗ್ಗೆ ತನಿಖೆ ನಡೆಸುವಂತೆ ಭಾರತದ ಸ್ಪರ್ಧಾ ಆಯೋಗ ಸಿಸಿಐ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಜಾಲತಾಣ ವೇದಿಕೆಗಳಾದ ಫೇಸ್‌ಬುಕ್ ಮತ್ತು ವಾಟ್ಸಾಪ್ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯ ವಿರುದ್ಧ ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಗಳ ಫಲಿತಾಂಶಕ್ಕಾಗಿ ಕಾಯುವುದು ಭಾರತದ ಸ್ಪರ್ಧಾ ಆಯೋಗಕ್ಕೆ (ಸಿಸಿಐ) "ವಿವೇಕಯುತವಾಗಿದೆ" ಎಂದು ನ್ಯಾಯಮೂರ್ತಿ ನವೀನ್ ಚಾವ್ಲಾ ಹೇಳಿದ್ದಾರೆ.

ಸಿಸಿಐ ನಿರ್ದೇಶಿಸಿದ ತನಿಖೆಯನ್ನು ತಡೆಯಲು ಫೇಸ್‌ಬುಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳಲ್ಲಿ ಯಾವುದೇ ಅರ್ಹ ಕಾರಣಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ.ಸುಪ್ರೀಂ ಕೋರ್ಟ್ ಪರಿಶೀಲಿಸುತ್ತಿರುವ ವ್ಯಕ್ತಿಗಳ ಗೌಪ್ಯತೆಯ ಉಲ್ಲಂಘನೆಯನ್ನು ತಾನು ಪರಿಶೀಲಿಸುತ್ತಿಲ್ಲ ಎಂದು ಸಿಸಿಐ ವಾದಿಸಿತ್ತು. ವಾಟ್ಸಾಪ್ ನ ಹೊಸ ಗೌಪ್ಯತೆ ನೀತಿಯು ಹೆಚ್ಚಿನ ಬಳಕೆದಾರರನ್ನು ಕರೆತರಲು ಉದ್ದೇಶಿತ ಜಾಹೀರಾತುಗಳಿಗಾಗಿ ಅತಿಯಾದ ದತ್ತಾಂಶ ಸಂಗ್ರಹಣೆ ಮತ್ತು ಗ್ರಾಹಕರ "ಫಾಲೋ" ಮಾಡಲು ಕಾರಣವಾಗುತ್ತದೆ ಎಂದು ನ್ಯಾಯಾಲಯದ ಮುಂದೆ ವಾದಿಸಿತ್ತು "ನ್ಯಾಯವ್ಯಾಪ್ತಿಯ ದೋಷದ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ" ಎಂದು ವಾಟ್ಸಾಪ್ ಮತ್ತು ಫೇಸ್‌ಬುಕ್ ತನ್ನ ನಿರ್ಧಾರವನ್ನು ಪ್ರಶ್ನಿಸಿ ಮಾಡಿದ ಮನವಿಗಳು "ಅಸಮರ್ಥ ಮತ್ತು ತಪ್ಪು ಕಲ್ಪನೆ" ಎಂದು ಅದು ವಾದಿಸಿತ್ತು.

ಹೊಸ ಗೌಪ್ಯತೆ ನೀತಿಯ ಬಗ್ಗೆ ತನಿಖೆ ನಡೆಸುವಂತೆ ಸಿಸಿಐನ ಮಾರ್ಚ್ 24 ರ ಆದೇಶವನ್ನು ವಾಟ್ಸಾಪ್ ಮತ್ತು ಫೇಸ್‌ಬುಕ್ ಪ್ರಶ್ನಿಸಿದ್ದವು.ಸಿಸಿಐ ನಿರ್ಧಾರವು ಆಯೋಗದ ಸುಯೋ ಮೋಟು ನ್ಯಾಯವ್ಯಾಪ್ತಿಯ ದುರುಪಯೋಗವಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com