ಕೋವಿಡ್-19 ಲಸಿಕೆ, ಆಕ್ಸಿಜನ್ ಪೂರೈಕೆ ವಿಷಯದಲ್ಲಿ 'ರಾಷ್ಟ್ರೀಯ ಯೋಜನೆ' ರೂಪಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ

ಕೋವಿಡ್-19 ಸೋಂಕಿನ ಎರಡನೇ ಅಲೆ ಸಮಯದಲ್ಲಿ ಹಲವು ರಾಜ್ಯಗಳಲ್ಲಿ ರೋಗಿಗಳಿಗೆ ಚಿಕಿತ್ಸೆಗೆ ಬೆಡ್, ಆಕ್ಸಿಜನ್ ಸಮಸ್ಯೆಯಿರುವ ಪರಿಸ್ಥಿತಿಯನ್ನು ಮನಗಂಡು ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ರಾಷ್ಟ್ರೀಯ ಯೋಜನೆ ರೂಪಿಸಬೇಕಾಗಿದೆ ಎಂದು ಹೇಳಿದೆ.
ಆಕ್ಸಿಜನ್ ತುಂಬಿಸಿಕೊಳ್ಳಲು ಕಾಯುತ್ತಿರುವ ಕುಟುಂಬ
ಆಕ್ಸಿಜನ್ ತುಂಬಿಸಿಕೊಳ್ಳಲು ಕಾಯುತ್ತಿರುವ ಕುಟುಂಬ

ನವದೆಹಲಿ: ಕೋವಿಡ್-19 ಸೋಂಕಿನ ಎರಡನೇ ಅಲೆಗೆ ದೇಶವೇ ತತ್ತರಿಸಿ ಹೋಗುತ್ತಿರುವ ಸಮಯದಲ್ಲಿ ಹಲವು ರಾಜ್ಯಗಳಲ್ಲಿ ರೋಗಿಗಳಿಗೆ ಚಿಕಿತ್ಸೆಗೆ ಬೆಡ್, ಆಕ್ಸಿಜನ್ ಸಮಸ್ಯೆಯಿರುವ ಪರಿಸ್ಥಿತಿಯನ್ನು ಮನಗಂಡು ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ರಾಷ್ಟ್ರೀಯ ಯೋಜನೆ ರೂಪಿಸಬೇಕಾಗಿದೆ ಎಂದು ಹೇಳಿದೆ.

ಕೋವಿಡ್-19 ಸೋಂಕಿತರಿಗೆ ನೀಡಲಾಗುತ್ತಿರುವ ಅಗತ್ಯ ಔಷಧಿಗಳು, ಅವರಿಗೆ ನೀಡುವ ಚಿಕಿತ್ಸೆ, ಆಸ್ಪತ್ರೆಗಳಲ್ಲಿ ಆಕ್ಸಿಜನ್, ಬೆಡ್ ವ್ಯವಸ್ಥೆ, ಲಸಿಕೆ ಬಗ್ಗೆ ರಾಷ್ಟ್ರೀಯ ಯೋಜನೆಯನ್ನು ತಯಾರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ, ದೇಶದಲ್ಲಿ ಕೋವಿಡ್-19 ಲಸಿಕೆಯ ವಿಧಾನ ಮತ್ತು ವಿಧಾನಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಪರಿಗಣಿಸುವಂತೆ ಸಹ ಸರ್ಕಾರಕ್ಕೆ ಸೂಚಿಸಿದೆ.

ಸಾಂಕ್ರಾಮಿಕದ ಮಧ್ಯೆ ಲಾಕ್ ಡೌನ್ ಘೋಷಿಸಲು ಹೈಕೋರ್ಟ್‌ಗಳ ಅಧಿಕಾರಕ್ಕೆ ಸಂಬಂಧಿಸಿದ ಅಂಶವನ್ನು ಅದು ಪರಿಶೀಲಿಸಲಾಗುವುದು ಎಂದು ನ್ಯಾಯಮೂರ್ತಿಗಳಾದ ಎಲ್ ಎನ್ ರಾವ್ ಮತ್ತು ಎಸ್ ಆರ್ ಭಟ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ಸ್ವಯಂಪ್ರೇರಿತ ಅರ್ಜಿ ವಿಚಾರಣೆಯಲ್ಲಿ ಹಿರಿಯ ನ್ಯಾಯವಾದಿ ಹರೀಶ್ ಸಾಳ್ವೆಯವರನ್ನು ಸುಪ್ರೀಂ ಕೋರ್ಟ್ ಅಮಿಕಸ್ ಕ್ಯೂರಿ(ನ್ಯಾಯಾಂಗದ ಸಲಹೆಗಾರ)ಯಾಗಿ ಕೂಡ ನೇಮಿಸಿದೆ.

ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ನೊಟೀಸ್ ಹೊರಡಿಸಿರುವ ನ್ಯಾಯಪೀಠ ನಾಳೆ ಮುಂದಿನ ವಿಚಾರಣೆಯನ್ನು ನಡೆಸಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com