ಏಪ್ರಿಲ್ 24 ರಿಂದ 18 ವರ್ಷದ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆಗಾಗಿ ನೋಂದಣಿ ಪ್ರಾರಂಭ

ಏ.24 ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಲಸಿಕೆಗಾಗಿ ನೋಂದಣಿ ಪ್ರಾರಂಭವಾಗಲಿದೆ. 
ಕೋವಿಡ್-19 ಲಸಿಕೆ
ಕೋವಿಡ್-19 ಲಸಿಕೆ

ನವದೆಹಲಿ: ಏ.24 ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಲಸಿಕೆಗಾಗಿ ನೋಂದಣಿ ಪ್ರಾರಂಭವಾಗಲಿದೆ. 

ಮೇ.1 ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಅಭಿಯಾನ ಪ್ರಾರಂಭಕ್ಕೆ ಕೇಂದ್ರ ಸರ್ಕಾರ ಆದೇಶ ನೀಡಿದ್ದು, ಅರ್ಹರು ಏ.24 ರಿಂದಲೇ ಕೋವಿನ್ ವೇದಿಕೆಯಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. 

ಕೋವಿಡ್-19 ಪ್ರಕರಣಗಳು ದೇಶಾದ್ಯಂತ ಹೆಚ್ಚುತ್ತಿದ್ದು, ಇದೇ ಮೊದಲ ಬಾರಿಗೆ ಎಲ್ಲಾ ವಯಸ್ಕರಿಗೂ ಲಸಿಕೆ ನೀಡುವ ಅಭಿಯಾನಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೋವಿಡ್-19 ಲಸಿಕೆಯ ಹೊಸ ನಿಯಮಗಳ ಪ್ರಕಾರ ರಾಜ್ಯಗಳು ಹಾಗೂ ಖಾಸಗಿ ಆಸ್ಪತ್ರೆಗಳು ಲಸಿಕೆಗಳನ್ನು ನೇರವಾಗಿ ಉತ್ಪಾದಕರಿಂದ ಖರೀದಿಸಬಹುದಾಗಿದೆ.

ಭಾರತದಲ್ಲಿ ಈಗ 2 ಲಸಿಕೆಗಳನ್ನು ನೀಡಲಾಗುತ್ತಿದ್ದು, ಸೆರಮ್ ಇನ್ಸ್ಟಿಟ್ಯೂಟ್ ನ ಕೋವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ನ ಕೋವ್ಯಾಕ್ಸೀನ್ ಲಸಿಕೆಗಳನ್ನು ಜನರು ಪಡೆಯುತ್ತಿದ್ದಾರೆ. ಈ ನಡುವೆ ರಷ್ಯಾದ ಸ್ಪುಟ್ನಿಕ್–V ಲಸಿಕೆಗೂ ಭಾರತ ಅನುಮತಿ ನೀಡಿದ್ದು ಶೀಘ್ರವೇ ಮಾರುಕಟ್ಟೆಗೆ ಬರಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com