ಲಸಿಕೆ ನೀತಿ ಪುನರ್ ವಿಮರ್ಶಿಸಿ, ಏಕರೂಪ ದರ ನಿಗದಿ ಮಾಡಿ: ಪ್ರಧಾನಿ ಮೋದಿಗೆ ಸೋನಿಯಾ ಗಾಂಧಿ ಆಗ್ರಹ

ಕೋವಿಡ್-19 ಲಸಿಕೆ ನೀತಿಯನ್ನು ಪುನರ್ ವಿಮರ್ಶೆ ಮಾಡಿ ಏಕ ರೂಪ ದರ ನಿಗದಿಪಡಿಸುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಕೋವಿಡ್-19 ಲಸಿಕೆ ನೀತಿಯನ್ನು ಪುನರ್ ವಿಮರ್ಶೆ ಮಾಡಿ ಏಕ ರೂಪ ದರ ನಿಗದಿಪಡಿಸುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಆಸ್ಪತ್ರೆಗಳಲ್ಲಿ ಬೆಡ್ ಲಭ್ಯವಿಲ್ಲ, ಆಕ್ಸಿಜನ್ ಸರಬರಾಜು ಸರಿಯಿಲ್ಲ, ಔಷಧಗಳ ಕೊರತೆ ಉಂಟಾಗುತ್ತಿದೆ. ಇಂಥಾ ಸಂದರ್ಭದಲ್ಲಿ ಸರ್ಕಾರ ಈ ರೀತಿಯ ತಾರತಮ್ಯ ನೀತಿ ಅನುಸರಿಸುತ್ತಿರೋದು ಏಕೆ ಎಂದು ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ. ಲಸಿಕೆ ನೀತಿಯನ್ನು ಕೇಂದ್ರ ಸರಕಾರ ಪುನರ್ ವಿಮರ್ಶೆ ಮಾಡಬೇಕೆಂದು ಆಗ್ರಹಿಸಿರುವ ಸೋನಿಯಾ ಗಾಂಧಿ, ಏಕರೂಪ ದರ ನಿಗದಿಗೆ ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರವು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡುವುದಾಗಿ ಹೇಳಿದೆ. ಇದಕ್ಕಾಗಿ ಸರ್ಕಾರವು ಹೊಸ ನೀತಿಯನ್ನು ಜಾರಿಗೆ ತಂದಿದೆ. ಈ ನಡುವೆ, ಕೊರೊನಾ ವೈರಸ್ ಲಸಿಕೆ ಉತ್ಪಾದಿಸುವ ಸೀರಮ್ ಇನ್ಸ್‌ಸ್ಟಿಟ್ಯೂಟ್ ಸಂಸ್ಥೆ ಕೂಡಾ ತನ್ನ ದರ ಪಟ್ಟಿ ಪ್ರಕಟಿಸಿದೆ.

ಪ್ರತಿ ಡೋಸ್ ಲಸಿಕೆಗೆ ಕೇಂದ್ರ ಸರ್ಕಾರಕ್ಕೆ 150 ರೂ. ರಾಜ್ಯ ಸರ್ಕಾರಗಳಿಗೆ 400 ರೂ. ಹಾಗೂ ಖಾಸಗಿ ಆಸ್ಪತ್ರೆಗಳಿಗೆ 600 ರೂ. ನಿಗದಿ ಮಾಡಿದೆ. ಹಾಗೆ ನೋಡಿದ್ರೆ, ದೇಶದಲ್ಲಿ ಉತ್ಪಾದನೆಯಾಗುವ ಒಟ್ಟು ಲಸಿಕೆ ಪೈಕಿ ಶೇ. 50 ರಷ್ಟು ಕೇಂದ್ರ ಸರ್ಕಾರಕ್ಕೆ ಲಭ್ಯವಾಗುತ್ತೆ.

ಈ ವಿಚಾರವಾಗಿ ತಮ್ಮ ಆಕ್ಷೇಪ ಎತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಲಸಿಕೆಯ ದರ ನಿಗದಿಯಲ್ಲಿ ತಾರತಮ್ಯ ಏಕೆ ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್‌ಗೆ 400 ರೂ. ನಿಗದಿಪಡಿಸಿರೋದು ಏಕೆ ಎಂದು ಸವಾಲೆಸೆದಿದ್ದಾರೆ.

ಕೊರೊನಾ ಸೋಂಕಿನ ಆರ್ಭಟ ತೀವ್ರ ಸ್ವರೂಪ ಪಡೆದಿರುವ ಇಂದಿನ ದಿನಗಳಲ್ಲಿ ಲಾಭಕೋರ ಪ್ರವೃತ್ತಿ ಏಕೆ ಎಂದು ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, ಒಂದೇ ವಿಧದ ಲಸಿಕೆಯನ್ನು ತಯಾರಿಸುವ ಒಂದೇ ಕಂಪನಿ 3 ಬಗೆಯ ದರ ನಿಗದಿ ಮಾಡಿರೋದು ಏಕೆ ಎಂದು ಪ್ರಶ್ನಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com