ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 13 ರೋಗಿಗಳು ಸಜೀವ ದಹನ
ಮೊನ್ನೆಯಷ್ಟೇ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಆಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆಯಾಗಿ 22 ಮಂದಿ ರೋಗಿಗಳು ಮೃತಪಟ್ಟಿದ್ದರು. ಕಳೆದ ವರ್ಷ ಕೊರೋನಾ ಸೋಂಕು ಬಂದ ಮೇಲೆ ದೇಶದ ಅಲ್ಲಲ್ಲಿ ಆಸ್ಪತ್ರೆಗಳಲ್ಲಿ ಹಲವು ದುರಂತ ಸಂಭವಿಸಿದೆ.
Published: 23rd April 2021 07:18 AM | Last Updated: 23rd April 2021 01:00 PM | A+A A-

ಬೆಂಕಿ ಅವಘಡ ಸಂಭವಿಸಿದ ವಿಜಯ್ ವಲ್ಲಭ ಆಸ್ಪತ್ರೆ
ಪಲ್ಗಾರ್ (ಮಹಾರಾಷ್ಟ್ರ): ಮೊನ್ನೆಯಷ್ಟೇ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಆಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆಯಾಗಿ 20ಕ್ಕೂ ಹೆಚ್ಚು ರೋಗಿಗಳು ಮೃತಪಟ್ಟಿದ್ದರು. ಕಳೆದ ವರ್ಷ ಕೊರೋನಾ ಸೋಂಕು ಬಂದ ಮೇಲೆ ದೇಶದ ಅಲ್ಲಲ್ಲಿ ಆಸ್ಪತ್ರೆಗಳಲ್ಲಿ ಹಲವು ದುರಂತ ಸಂಭವಿಸಿದೆ.
ಇಂದು ನಸುಕಿನ ಜಾವ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈಯಲ್ಲಿರುವ ವಿಜಯ್ ವಲ್ಲಭ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ 13 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ ಎಂದು ವಸೈ ವಿರಾಲ್ ನಗರ ಪಾಲಿಕೆ ತಿಳಿಸಿದೆ. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಈ ದುರಂತ ಸಂಭವಿಸಿದೆ.
ಕೋವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದ ಎಸಿ ಘಟಕದಲ್ಲಿ ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಜಿಲ್ಲಾ ವಿಪತ್ತು ನಿಯಂತ್ರಣ ಕೋಶದ ಮುಖ್ಯಸ್ಥ ವಿವೇಕಾನಂದ್ ಕದಮ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಒಟ್ಟು 16 ಮಂದಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು.
Maharashtra | 13 people have died in a fire that broke out at Vijay Vallabh COVID care hospital in Virar, early morning today pic.twitter.com/DoySNt4CSQ
— ANI (@ANI) April 23, 2021
ಬೆಂಕಿ ಅವಘಡದಲ್ಲಿ ಗಾಯಗೊಂಡಿರುವ ಮತ್ತು ಇತರ ಸುರಕ್ಷಿತ ರೋಗಿಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸುವ ಕೆಲಸ ಮುಂದುವರಿದಿದೆ. ವಸೈ ನಗರ ಪಾಲಿಕೆಯಿಂದ ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಸಿ ಒಂದು ಗಂಟೆಯಲ್ಲಿ ಬೆಂಕಿ ನಂದಿಸುವ ಕಾರ್ಯವನ್ನು ಮಾಡಲಾಯಿತು.