ಸುಮಿತ್ರಾ ಮಹಾಜನ್ ಸಾವಿನ ಸುಳ್ಳು ಸುದ್ದಿ ಟ್ವೀಟ್ ಮಾಡಿ ನಂತರ ಡಿಲೀಟ್ ಮಾಡಿದ ಶಶಿ ತರೂರ್!

ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಮೃತಪಟ್ಟಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ಬಳಿಕ ಅದನ್ನು ಡಿಲೀಟ್ ಮಾಡಿದ್ದಾರೆ. 
ಶಶಿ ತರೂರ್
ಶಶಿ ತರೂರ್

ನವದೆಹಲಿ: ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಮೃತಪಟ್ಟಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ಬಳಿಕ ಅದನ್ನು ಡಿಲೀಟ್ ಮಾಡಿದ್ದಾರೆ. 

ಶಶಿ ತರೂರ್ ಟ್ವೀಟ್‌ ಗಮನಕ್ಕೆ ಬಂದ ಕೂಡಲೇ ಬಿಜೆಪಿ ನಾಯಕರು ಗಮನ ಸೆಳೆದಿದ್ದರು. ಮಹಾಜನ್ ಅವರು ಆರೋಗ್ಯದಿಂದ ಇದ್ದಾರೆ ಎಂದು ಬಿಜೆಪಿ ನಾಯಕ ಕೈಲಾಸ್ ವಿಜಯವರ್ಗೀಯ ಪ್ರತಿಕ್ರಿಯಿಸಿದ್ದರು. ತಕ್ಷಣ ಎಚ್ಚೆತ್ತುಕೊಂಡ ತರೂರ್ ಟ್ವೀಟ್ ಡಿಲೀಟ್ ಮಾಡಿದ್ದರು.

ಈ ಟ್ವೀಟ್ ಡಿಲೀಟ್ ಮಾಡುತ್ತಿರುವುದು ಸಮಾಧಾನ ತಂದಿದೆ, ವಿಶ್ವಾಸಾರ್ಹ ಮೂಲದಿಂದ ಬಂದಿದ್ದು ಎಂಬು ನಂಬಿ ನಾನು ಆ ಟ್ವೀಟ್ ಮಾಡಿದ್ದೆ,  ಯಾರಾದರೂ ಇಂಥ ಸುದ್ದಿಯನ್ನ ಸೃಷ್ಟಿ ಮಾಡುತ್ತಾರೆಂಬುದು ಆಘಾತಕಾರಿ ಸಂಗತಿ” ಎಂದು ಶಶಿ ತರೂರ್ ಟ್ವೀಟ್ ಮಾಡಿದ್ದು, ಸುಮಿತ್ರಾ ಮಹಾಜನ್ ಸಾವಿನ ಸುದ್ದಿ ನಕಲಿ ಎಂದು ಮನವರಿಕೆ ಮಾಡಿಕೊಟ್ಟ ಮಂದಿಗೆ ಧನ್ಯವಾದ ಕೂಡ ಹೇಳಿದ್ದಾರೆ.

ಮಾಜಿ ಲೋಕಸಭಾ ಅಧ್ಯಕ್ಷೆ ಸುಮಿತ್ರಾ ಮಹಾಜನ್ ಅವರಿಗೆ ನಿನ್ನೆ ಜ್ವರ ಕಾಣಿಸಿಕೊಂಡು ಮಧ್ಯಪ್ರದೇಶದ ಇಂದೋರ್​ನಲ್ಲಿರುವ ಬಾಂಬೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರು ಈಗ ಆರಾಮವಾಗಿದ್ದಾರೆ ಎಂದು ಅಲ್ಲಿನ ವೈದ್ಯರೂ ಕೂಡ ಸ್ಪಷ್ಟಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com