ಮೋದಿ ಜೊತೆಗಿನ ಸಭೆಯಲ್ಲಿ ನೀಡಿದ ಹೇಳಿಕೆಗಳು ಟಿವಿಯಲ್ಲಿ ಪ್ರಸಾರ: ಕೇಜ್ರಿವಾಲ್ ವಿಷಾದ

ಕೋವಿಡ್ ಸಾಂಕ್ರಾಮಿಕ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್ ಬಿಕ್ಕಟ್ಟು ಕುರಿತಂತೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡಿದ ವಿಡಿಯೋ ಟೆಲಿವಿಜನ್ ಗಳಲ್ಲಿ ಪ್ರಸಾರವಾಗಿರುವುದು ವಿವಾದಕ್ಕೆ ಗುರಿಯಾಗಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಸಾಂಕ್ರಾಮಿಕ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್ ಬಿಕ್ಕಟ್ಟು ಕುರಿತಂತೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡಿದ ವಿಡಿಯೋ ಟೆಲಿವಿಜನ್ ಗಳಲ್ಲಿ ಪ್ರಸಾರವಾಗಿರುವುದು ವಿವಾದಕ್ಕೆ ಗುರಿಯಾಗಿದೆ. ಕೇಜ್ರಿವಾಲ್ ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಗಳು ಆರೋಪಿಸಿದ್ದಾರೆ.

ಪ್ರಧಾನಿ ಜೊತೆಯಲ್ಲಿನ ಸಭೆಯಲ್ಲಿನ ವೈಯಕ್ತಿಕ ಮಾತುಕತೆಗಳನ್ನು ಸಾರ್ವಜನಿಕವಾಗಿ ಪ್ರಸಾರ ಮಾಡುವಂತಹ ಹೊಸ ಕೀಳು ಮಟ್ಟಕ್ಕೆ ಅವರು ಇಳಿಯುತ್ತಾರೆ ಎಂದು ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಆರೋಪಿಸಿದ್ದಾರೆ. 

ಕೇಜ್ರಿವಾಲ್ ಅವರ ಇಡೀ ಭಾಷಣದಲ್ಲಿ ಯಾವುದೇ ಪರಿಹಾರ ನೀಡಲಿಲ್ಲ ಬದಲಿಗೆ ರಾಜಕೀಯ ಮಾಡಿದರು. ಜವಾಬ್ದಾರಿಯಿಂದ ನುಣುಚಿಕೊಂಡರು. ಪರಿಸ್ಥಿತಿಯನ್ನು ಹೇಗೆ ಸುಧಾರಿಸಬಹುದು ಎಂದು ಎಲ್ಲಾ ಮುಖ್ಯಮಂತ್ರಿಗಳು ಕೇಳಿದರು. ಆದರೆ, ಏನು ಮಾಡಬೇಕು ಎಂಬುದರ ಬಗ್ಗೆ ಕೇಜ್ರಿವಾಲ್ ಏನು ಹೇಳಲಿಲ್ಲ ಎಂದು ಮೂಲಗಳು ಹೇಳಿವೆ. ಸಾರ್ವಜನಿಕವಾಗಿ ಅವರ ಹೇಳಿಕೆ, ಕೇಂದ್ರ ಸರ್ಕಾರದೊಂದಿಗೆ ಸಂಬಂಧ ಸರಿಯಿಲ್ಲ ಎಂಬುದನ್ನು ತೋರಿಸುತ್ತದೆ ಎಂದು ಸಲಹೆ ನೀಡಿವೆ.

ಕೇಜ್ರಿವಾಲ್ ಆಕ್ಸಿಜನ್ ಏರ್ ಲಿಫ್ಟ್ ಬಗ್ಗೆ ಮಾತನಾಡಿದ್ದಾರೆ. ಆದರೆ, ಅದನ್ನು ಈಗಾಗಲೇ ಮಾಡಿರುವುದು ಅವರಿಗೆ ಗೊತ್ತೆ ಇಲ್ಲ, ಇನ್ನು ಆಕ್ಸಿಜನ್ ಎಕ್ಸ್ ಪ್ರೆಸ್ ಬಗ್ಗೆ ಅವರು ಮಾತನಾಡಿದ್ದಾರೆ, ಆದರೆ, ಈ ಬಗ್ಗೆ ತಮ್ಮೊಂದಿಗೆ ಅವರು ಸಂಪರ್ಕಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿವೆ.

ಕೇಂದ್ರ ಸರ್ಕಾರದ ಅಧಿಕಾರಿಗಳ ತೀಕ್ಷ್ಣ ಪ್ರತಿಕ್ರಿಯೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳ ಕಚೇರಿ, ಸಂವಾದವನ್ನು ನೇರವಾಗಿ ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ, ಲಿಖಿತ ಅಥವಾ ಮೌಖಿಕವಾಗಿ ಬಾರದ ಹಿನ್ನೆಲೆಯಲ್ಲಿ ಸಿಎಂ ವಿಳಾಸದಲ್ಲಿ ನೇರ ಪ್ರಸಾರ ಮಾಡಲಾಗಿದೆ, ಅದಕ್ಕಾಗಿ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com