ನನ್ನನ್ನೂ ಆಹ್ವಾನಿಸಿದ್ದರೆ ಮೋದಿ-ಸಿಎಂಗಳ ಕೋವಿಡ್ ಸಭೆಯಲ್ಲಿ ಭಾಗವಹಿಸಬಹುದಿತ್ತು: ಮಮತಾ ಬ್ಯಾನರ್ಜಿ

ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್-19 ಕುರಿತ ಮುಖ್ಯಮಂತ್ರಿಗಳ ಉನ್ನತಮಟ್ಟದ ಸಭೆಗೆ ನನಗೂ ಆಹ್ವಾನ ನೀಡಿದ್ದರೆ ಸಭೆಯಲ್ಲಿ ಭಾಗವಹಿಸಬಹುದಿತ್ತು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ...
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ದುರ್ಗಾಪುರ: ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್-19 ಕುರಿತ ಮುಖ್ಯಮಂತ್ರಿಗಳ ಉನ್ನತಮಟ್ಟದ ಸಭೆಗೆ ನನಗೂ ಆಹ್ವಾನ ನೀಡಿದ್ದರೆ ಸಭೆಯಲ್ಲಿ ಭಾಗವಹಿಸಬಹುದಿತ್ತು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಕೋವಿಡ್ ಪರಿಸ್ಥಿತಿಯ ಕುರಿತು ಶುಕ್ರವಾರ ನಡೆದ ಸಭೆ ಕೊರೋನಾ ಹೆಚ್ಚು ಪೀಡಿತ ರಾಜ್ಯಗಳಿಗೆ ಮಾತ್ರ ಎಂದು ಕೇಳಿದ್ದೇನೆ. ಆದ್ದರಿಂದ ಈ ಬಗ್ಗೆ ನನಗೆ ತಿಳಿಸಿಲ್ಲ ಎಂದರು.

ಕೇಂದ್ರ ಸರ್ಕಾರ "ಅಸಮರ್ಪಕ ನಿರ್ವಹಣೆ ಪ್ರಸ್ತುತ ಪರಿಸ್ಥಿತಿಗೆ ಕಾರಣವಾಗಿದೆ" ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಆರೋಪಿಸಿದ್ದಾರೆ.

ಗುಜರಾತ್‌ಗೆ ಶೇಕಡಾ 60 ರಷ್ಟು ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗಿದೆ ಎಂದು ಆರೋಪಿಸಿದ ದೀದಿ, ಇತರ ರಾಜ್ಯಗಳಿಗೆ ಸ್ವಲ್ಪ ಪ್ರಮಾಣದ ಲಸಿಕೆ ನೀಡಲಾಗಿದೆ. "ಅತಿ ಹೆಚ್ಚು ಕೊರೋನಾ ಪೀಡಿತ ರಾಜ್ಯಗಳ ಬಗ್ಗೆ ನಾವು ಏನನ್ನೂ ಹೇಳುವಂತಿಲ್ಲ, ಆದರೂ ಏಕರೂಪದ ನೀತಿ ಇರಬೇಕು" ಎಂದು ವ್ಯಂಗ್ಯವಾಡಿದ್ದಾರೆ.

ಇಂದು 11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉನ್ನತಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ, ಜೀವ ಉಳಿಸುವ ಅನಿಲ(ಆಕ್ಸಿಜನ್) ಮತ್ತು ಔಷಧಿಗಳ ಅವಶ್ಯಕತೆ ಪೂರೈಸಲು ಎಲ್ಲಾ ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com