ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳಿಂದ ಶೇ.74.15 ರಷ್ಟು ಹೊಸ ಕೋವಿಡ್ ಪ್ರಕರಣ: ಕೇಂದ್ರ ಸರ್ಕಾರ
ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಮತ್ತಿತರ 10 ರಾಜ್ಯಗಳಿಂದ ಒಂದೇ ದಿನ ಶೇ.74.15 ರಷ್ಟು ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.
Published: 24th April 2021 08:11 PM | Last Updated: 24th April 2021 08:15 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಮತ್ತಿತರ 10 ರಾಜ್ಯಗಳಿಂದ ಒಂದೇ ದಿನ ಶೇ.74.15 ರಷ್ಟು ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.
ಅಲ್ಲದೇ 12 ರಾಜ್ಯಗಳಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರಗತಿಯ ಏರಿಕೆ ಕಂಡುಬರುತ್ತಿದೆ.ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ, ಕರ್ನಾಟಕ, ಛತ್ತೀಸ್ ಗಢ, ಮಧ್ಯಪ್ರದೇಶ, ಕೇರಳ, ಗುಜರಾತ್, ತಮಿಳುನಾಡು, ರಾಜಸ್ತಾನ, ಬಿಹಾರ ಮತ್ತು ಪಶ್ಚಿಮ ಬಂಗಾಳ ಈ ರಾಜ್ಯಗಳಾಗಿವೆ.
ಒಂದೇ ದಿನ ದೇಶದಲ್ಲಿ 3,46,786 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗುವುದರೊಂದಿಗೆ ದೇಶದಲ್ಲಿನ ಒಟ್ಟಾರೇ ಸೋಂಕಿತರ ಸಂಖ್ಯೆ 1,66,10,481ಕ್ಕೆ ಏರಿಕೆಯಾಗಿದ್ದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 25 ಲಕ್ಷ ದಾಟಿದೆ ಒಂದೇ ದಿನ 2,624ಕ್ಕೂ ಹೆಚ್ಚು ಸಾವು ಪ್ರಕರಣ ದಾಖಲಾಗುವುದರೊಂದಿಗೆ ಒಟ್ಟಾರೇ ಸಾವಿನ ಸಂಖ್ಯೆ 1.89,544ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ, ಕರ್ನಾಟಕ, ಕೇರಳ, ಛತ್ತೀಸ್ ಗಢ, ಮಧ್ಯಪ್ರದೇಶ, ತಮಿಳುನಾಡು, ಗುಜರಾತ್ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಶೇ.74.15 ರಷ್ಟು ಹೊಸ ಪ್ರಕರಣಗಳು ವರದಿಯಾಗಿದೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ. 66.66 ರಷ್ಟು ಮಹಾರಾಷ್ಟ್ರ, ಛತ್ತೀಸ್ ಗಢ, ಉತ್ತರ ಪ್ರದೇಶ, ಕರ್ನಾಟಕ, ರಾಜಸ್ಥಾನ, ಗುಜರಾತ್ ಮತ್ತು ಕೇರಳ ರಾಜ್ಯಗಳಿಂದ ದಾಖಲಾಗಿದೆ.ದೇಶದಲ್ಲಿ ಕೋವಿಡ್ ಲಸಿಕೆ ಪಡೆದವರ ಸಂಖ್ಯೆ 13.83 ಕೋಟಿ ದಾಟಿದೆ ಎಂದು ಸಚಿವಾಲಯ ಹೇಳಿದೆ.