ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಗೆ ಕೊರೋನಾ ಪಾಸಿಟಿವ್

ತಮಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಶನಿವಾರ ಮಾಹಿತಿ ನೀಡಿದ್ದಾರೆ
ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್
ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್

ಅಹಮದಾಬಾದ್: ತಮಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಶನಿವಾರ ಮಾಹಿತಿ ನೀಡಿದ್ದಾರೆ.

ಆರೋಗ್ಯ ಖಾತೆಯನ್ನು ಹೊಂದಿರುವ 64 ವರ್ಷದ ಪಟೇಲ್ ಅವರು ಕೊರೋನಾ ಪಾಸಿಟಿವ್ ಬಂದ ನಂತರ ಯು ಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಅಂಡ್ ರಿಸರ್ಚ್ ಸೆಂಟರ್ಗೆ ದಾಖಲಾಗಿದ್ದಾರೆ.

ನನಗೆ ಕೊರೋನಾ ವೈರಸ್ನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡ ನಂತರ ನಾನು ಆರ್ಟಿ-ಪಿಸಿಆರ್ ಪರೀಕ್ಷೆ ಮಾಡಿಸಿದ್ದು, ವರದಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ" ಎಂದು ಪಟೇಲ್ ಅವರು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ನಿತಿನ್ ಪಟೇಲ್ ಅವರು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com