ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೋವಿಡ್‌ನಿಂದ ಚೇತರಿಕೆ: ಕಾಂಗ್ರೆಸ್

ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲಾ ಶನಿವಾರ ಹೇಳಿದ್ದಾರೆ.
ಡಾ.ಮನ್ ಮೋಹನ್ ಸಿಂಗ್
ಡಾ.ಮನ್ ಮೋಹನ್ ಸಿಂಗ್

ನವದೆಹಲಿ: ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲಾ ಶನಿವಾರ ಹೇಳಿದ್ದಾರೆ.

ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಮತ್ತೆ, ಮತ್ತೆ ಬರುತ್ತಿದ್ದ ಜ್ವರ ಈಗ ಬರುತ್ತಿಲ್ಲ ಎಂದು  ಸುರ್ಜೇವಾಲಾ ತಿಳಿಸಿದ್ದಾರೆ.

ಕೋವಿಡ್-19 ಪಾಸಿಟಿವ್ ದೃಢಪಟ್ಟ ನಂತರ ಸ್ವಲ್ಪ ಪ್ರಮಾಣದ ಜ್ವರದೊಂದಿಗೆ ಏಪ್ರಿಲ್ 19ರಂದು ಮನ್ ಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. 88 ವರ್ಷದ ಮನ್ ಮೋಹನ್ ಸಿಂಗ್ ಮಾರ್ಚ್ 4 ಮತ್ತು  ಏಪ್ರಿಲ್ 3 ರಂದು ಎರಡು ಡೋಸ್ ಕೋವಿಡ್-19 ಲಸಿಕೆಯನ್ನು ಪಡೆದಿದ್ದರು.

ಮನ್ ಮೋಹನ್ ಸಿಂಗ್ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು, ಭಾರತೀಯರಿಗೆ ಧನ್ಯವಾದ ಸಲ್ಲಿಸುವುದಾಗಿ ಸುರ್ಜೇವಾಲಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com