ಕೋವ್ಯಾಕ್ಸಿನ್
ಕೋವ್ಯಾಕ್ಸಿನ್

ದೇಶಿ ಲಸಿಕೆ ಕೋವ್ಯಾಕ್ಸಿನ್ ಬೆಲೆ ನಿಗದಿ, ರಾಜ್ಯಗಳಿಗೆ ಪ್ರತಿ ಡೋಸ್‌ಗೆ 600 ರೂ., ಖಾಸಗಿ ಆಸ್ಪತ್ರೆಗಳಿಗೆ 1200 ರೂ

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ತಯಾರಿಸಿರುವ ದೇಶಿ ಕೋವಿಡ್ -19 ಲಸಿಕೆ, ಕೋವಾಕ್ಸಿನ್ ಗೆ ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್‌ಗೆ 600 ರೂಪಾಯಿ

ನವದೆಹಲಿ: ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ತಯಾರಿಸಿರುವ ದೇಶಿ ಕೋವಿಡ್ -19 ಲಸಿಕೆ, ಕೋವಾಕ್ಸಿನ್ ಗೆ ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್‌ಗೆ 600 ರೂಪಾಯಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ 1200 ರೂ. ಬೆಲೆ ನಿಗದಿಪಡಿಸಿದೆ. 

ಎರಡು ದಿನಗಳ ಹಿಂದಷ್ಟೇ ಕೋವ್ಯಾಕ್ಸಿನ್ ಪ್ರತಿಸ್ಪರ್ಧಿ ಕೋವಿಶೀಲ್ಡ್ ದರ ಪ್ರಕಟಿಸಿದ್ದ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ರಾಜ್ಯ ಸರ್ಕಾರಗಳಿಗೆ 400 ರೂಪಾಯಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ 600 ರೂಪಾಯಿ ಬೆಲೆ ನಿಗದಿಪಡಿಸಿತ್ತು. ಇದಕ್ಕೆ ತೀವ್ರ ವಿರೋಧ ಸಹ ವ್ಯಕ್ತವಾಗಿತ್ತು.

ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಪ್ರಸ್ತುತ ಭಾರತದಲ್ಲಿ ಕೋವಿಡ್-19 ಗೆ ಲಭ್ಯವಿರುವ ಎರಡು ಲಸಿಕೆಗಳಾಗಿವೆ.


ಐಸಿಎಂಆರ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಸಹಯೋಗದೊಂದಿಗೆ ಕೋವಾಕ್ಸಿನ್ ಅನ್ನು ಅಭಿವೃದ್ಧಿಪಡಿಸಿರುವ ಭಾರತ್ ಬಯೋಟೆಕ್,  ಕಂಪನಿಯು "ಭಾರತದ ಲಸಿಕೆಯನ್ನು ಪ್ರತಿ ಡೋಸ್‌ಗೆ 150 ರೂ.ಗೆ ಅಭಿವೃದ್ಧಿಪಡಿಸಿ, ತಯಾರಿಸಿ ಮತ್ತು ಪೂರೈಸುವುದನ್ನು ಗೌರವಿಸುತ್ತದೆ", ಇದನ್ನು ಕೇಂದ್ರವು ಉಚಿತವಾಗಿ ವಿತರಿಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ,.

ಕೇಂದ್ರ ಸರ್ಕಾರದ ನೀತಿಯಂತೆ ತಮ್ಮ ಸಂಸ್ಥೆ ಉತ್ಪಾದಿಸುವ ಲಸಿಕೆಯ ಡೋಸ್ ಗಳ ಪ್ರಮಾಣದಲ್ಲಿ ಶೇ. 50 ರಷ್ಟು ಲಸಿಕೆಯನ್ನು 150 ರೂಪಾಯಿಗೆ ಕೇಂದ್ರ ಸರ್ಕಾರಕ್ಕೆ ಪೂರೈಕೆ ಮಾಡಲಿದೆ. ಉಳಿದ ಶೇ. 50ರಷ್ಟು ಲಸಿಕೆಯನ್ನು ರಾಜ್ಯ ಸರ್ಕಾರ, ಖಾಸಗಿ ಆಸ್ಪತ್ರೆ ಹಾಗೂ ವಿದೇಶಕ್ಕೆ ಪೂರೈಕೆ ಆಗಲಿದೆ ಎಂದು ಭಾರತ್ ಬಯೋಟೆಕ್ ತಿಳಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com